ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಾಗ ಬಿಸಿಲು, ಮೋಡದ ಜೊತೆಗೆ ಅಲ್ಲಲ್ಲಿ ದಿನದಲ್ಲಿ 2 ಅಥವಾ 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈ ವಾತಾವರಣವು ಜೂನ್ 4ರ ತನಕ ಮುಂದುವರಿಯುವ ಮುನ್ಸೂಚೆನೆ ಇದ್ದು, 5 ರಿಂದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ.
ಈಗಿನಂತೆ ಜೂನ್ 10ರಿಂದ ಮತ್ತೆ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಮಳೆ ಆರಂಭವಾಗಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ದಿನದಲ್ಲಿ ಒಂದೆರಡು ಮಳೆಯ ಮುನ್ಸೂಚೆನೆ ಇದೆ.
ಜೂನ್ 4ರ ತನಕ ಈ ವಾತಾವರಣ ಮುಂದುವರಿಯಬಹುದು. ನಂತರ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು, ಜೂನ್ 10ರಿಂದ ಸಾಮಾನ್ಯ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಕಲಬುರ್ಗಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಜೂನ್ 4ರಂದು ಒಂದೆರಡು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ನಂತರ ಬಿಸಿಲಿನ ವಾತಾವರಣ ಮುಂದುವರಿಯಲಿದೆ.
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ ಚುರುಕಾಗಬಹುದು.
ಇದರ ಹೊರತು ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಮುಂದುವರಿಯಲಿದೆ.
ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…
ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…