10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

ದಾಖಲೆಯ 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಗುರುವಾರ  ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್‌ಡಿಎ ಬಲಪ್ರದರ್ಶನದ ನಡುವೆ ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಬಿಹಾರ ರಾಜ್ಯಪಾಲ ಆರಿಫ್ ಮೊಹ್ಮದ್ ಖಾನ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ನಂತರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಇತರ ಹಲವಾರು ಕೇಂದ್ರ ಸಚಿವರು ಮತ್ತು 11 ಎನ್‌ಡಿಎ-ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

243 ಸದಸ್ಯರ ವಿಧಾನಸಭೆಯಲ್ಲಿ ಎನ್‌ಡಿಎ 202 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಬಿಜೆಪಿ 89, ಜೆಡಿ(ಯು) 85, ಎಲ್‌ಜೆಪಿ(ಆರ್‌ವಿ) 19, ಎಚ್‌ಎಎಂ 5 ಮತ್ತು ಆರ್‌ಎಲ್‌ಎಂ 4 ಸ್ಥಾನಗಳನ್ನು ಗೆದ್ದುಕೊಂಡಿದೆ.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

6 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

7 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

14 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

14 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

20 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago