ದಾಖಲೆಯ 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಗುರುವಾರ ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್‌ಡಿಎ ಬಲಪ್ರದರ್ಶನದ ನಡುವೆ ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಬಿಹಾರ ರಾಜ್ಯಪಾಲ ಆರಿಫ್ ಮೊಹ್ಮದ್ ಖಾನ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ನಂತರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಇತರ ಹಲವಾರು ಕೇಂದ್ರ ಸಚಿವರು ಮತ್ತು 11 ಎನ್‌ಡಿಎ-ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
243 ಸದಸ್ಯರ ವಿಧಾನಸಭೆಯಲ್ಲಿ ಎನ್‌ಡಿಎ 202 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಬಿಜೆಪಿ 89, ಜೆಡಿ(ಯು) 85, ಎಲ್‌ಜೆಪಿ(ಆರ್‌ವಿ) 19, ಎಚ್‌ಎಎಂ 5 ಮತ್ತು ಆರ್‌ಎಲ್‌ಎಂ 4 ಸ್ಥಾನಗಳನ್ನು ಗೆದ್ದುಕೊಂಡಿದೆ.
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…