ಉತ್ತರ ಪ್ರದೇಶದ ಲಲಿತ್‌ಪುರ ಜಿಲ್ಲೆಯ 45 ವರ್ಷದ ವ್ಯಕ್ತಿಯೊಬ್ಬ ತನ್ನ 10 ವರ್ಷದ ಮಗಳ ಕಾಲುಗಳಿಗೆ ಹಗ್ಗದಿಂದ ಕಟ್ಟಿ ಮನೆಯ ಮೇಲ್ಛಾವಣಿಗೆ ತಲೆಕೆಳಗಾಗಿ ನೇತಾಕಿದ್ದಾನೆ.
ಬಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಧಮ್ನಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಾನುಷವಾಗಿ ನಡೆದುಕೊಂಡ ಆರೋಪದ ಮೇಲೆ ಕ್ರೂರ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ತಂದೆ ಗೋವಿಂದ್ ರಾಯ್ ರೈಕ್ವಾರ್ ತನ್ನ ಮಗಳನ್ನು ಹಿಂಸಿಸಿದ್ದಾನೆ ಎಂದು ಸೋಮವಾರ ಬಾರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ರಾಜಾ ದಿನೇಶ್ ಸಿಂಗ್ ಹೇಳಿದ್ದಾರೆ.
“ಅಪ್ಪಾ, ದಯವಿಟ್ಟು ನನ್ನನ್ನು ಬಿಟ್ಟುಬಿಡು” ಎಂದು ಮಗಳು ಪರಿಪರಿಯಾಗಿ ಕೇಳಿಕೊಂಡರು ಪಾಪಿ ತಂದೆ ಕ್ರೂರವಾಗಿ ನಡೆದುಕೊಂಡಿದ್ದಾನೆ. ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಈ ಕ್ರೌರ್ಯವನ್ನು ಕಂಡ ಸ್ಥಳೀಯ ಗ್ರಾಮಸ್ಥರೊಬ್ಬರು ಮಧ್ಯಪ್ರವೇಶಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ಈ ವಿಷಯವನ್ನು ಬಾರ್ ಪೊಲೀಸ್ ಠಾಣೆಗೆ ವರದಿ ಮಾಡಲಾಗಿದ್ದು, ಅಲ್ಲಿ ಸಬ್ ಇನ್ಸ್‌ಪೆಕ್ಟರ್ ಮಹೇಂದ್ರ ಸಿಂಗ್ ಅವರು ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ಕೂಡಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…