10.50 ಕೋಟಿ ಸಾಲ ವಂಚನೆ ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಸೊಸೈಟಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ಆರ್ಥಿಕ ನಷ್ಟ ಉಂಟುಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಸೊಸೈಟಿಯ ಅಧ್ಯಕ್ಷ ಪಿ. ಮಂಜಪ್ಪ ಹಾಗೂ ಎಂ.ಎಸ್‌. ಸುಬ್ರಹ್ಮಣ್ಯ ಕನ್ಸ್‌ಟ್ರಕ್ಷನ್‌ ಅಂಡ್‌ ಡೆವಲಪ್‌ಮೆಂಟ್‌ ಕಂಪನಿ ವಿರುದ್ಧ ಸರ್ಜಾಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸೊಸೈಟಿಯ ಆಡಳಿತ ಮಂಡಳಿ ಸದಸ್ಯ ಸತ್ತಪ್ಪ ಹೂಗಾರ್‌ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿರುವ ಪೊಲೀಸರು, 2018ರಿಂದ 2025ರವರೆಗೆ ನಡೆದಿರುವ ಸಾಲ ವ್ಯವಹಾರಕ್ಕೆ ಸಂಬಂಧಿಸಿದ ಆರೋಪಗಳ ಕುರಿತು ತನಿಖೆ ನಡೆಸುತ್ತಿದ್ದಾರೆ.

ದೂರಿನ ಪ್ರಕಾರ, ಸೊಸೈಟಿಯಲ್ಲಿ ಸಾವಿರಾರು ಮಂದಿ ಕೋಟ್ಯಂತರ ರೂಪಾಯಿ ಠೇವಣಿ ಇಟ್ಟಿದ್ದಾರೆ. ಈ ಪೈಕಿ ಎಂ.ಎಸ್‌. ಸುಬ್ರಹ್ಮಣ್ಯ ಕನ್ಸ್‌ಟ್ರಕ್ಷನ್‌ ಅಂಡ್‌ ಡೆವಲಪ್‌ಮೆಂಟ್‌ ಕಂಪನಿಗೆ 7.50 ಕೋಟಿ ಸಾಲ ಮಂಜೂರು ಮಾಡಲಾಗಿತ್ತು. ಆದರೆ ಸಾಲ ಮಂಜೂರಾತಿ ವೇಳೆ ಅಗತ್ಯ ನಿಯಮಗಳನ್ನು ಪಾಲಿಸಿಲ್ಲ ಹಾಗೂ ಶ್ಯೂರಿಟಿಯಾಗಿ ಪಡೆದಿದ್ದ ಜಮೀನು ದಾಖಲೆಗಳು ನಕಲಿ ಎನ್ನಲಾಗಿದೆ.

ನಕಲಿ ದಾಖಲೆಗಳಿದ್ದರೂ ಸಾಲ ಮಂಜೂರು ಮಾಡಲಾಗಿದ್ದು, 2025ರ ವೇಳೆಗೆ ಬಡ್ಡಿ ಸೇರಿದಂತೆ ಸಾಲದ ಮೊತ್ತ 10.50 ಕೋಟಿಗೆ ಏರಿಕೆಯಾಗಿದೆ. ಇದರಿಂದ ಸೊಸೈಟಿಗೆ ಆರ್ಥಿಕ ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಒಳಸಂಚು, ವಂಚನೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೆಲಮಂಗಲದಲ್ಲೂ 10.56 ಕೋಟಿ ಸಾಲ ಪ್ರಕರಣ

ಇದೇ ಸೊಸೈಟಿಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮೀಣ ಪೊಲೀಸ್‌ ಠಾಣೆಯಲ್ಲೂ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಎಚ್‌.ಬಿ. ಮಂಜುನಾಥ್‌ ಅವರಿಗೆ ನಿಯಮಬಾಹಿರವಾಗಿ 10.56 ಕೋಟಿ ಸಾಲ ಮಂಜೂರು ಮಾಡಿ ಸೊಸೈಟಿಗೆ ನಷ್ಟ ಉಂಟುಮಾಡಲಾಗಿದೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಸೊಸೈಟಿಯ ಮತ್ತೊಬ್ಬ ಸದಸ್ಯ ನಿತಿನ್‌ ನೀಡಿದ ದೂರಿನ ಮೇರೆಗೆ ಪಿ. ಮಂಜಪ್ಪ ಹಾಗೂ ಮಂಜುನಾಥ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಎರಡೂ ಪ್ರಕರಣಗಳ ಸ್ವರೂಪ ಹಾಗೂ ಆರೋಪಗಳ ಹಿನ್ನೆಲೆಯಲ್ಲಿ ತನಿಖೆಗಾಗಿ ವಿಶೇಷ ತಂಡ ರಚಿಸುವ ಪ್ರಸ್ತಾವವಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Ramesh Babu

Journalist

Recent Posts

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

28 minutes ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

12 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

18 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

22 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

23 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago