100 ನೂತನ ಬಿಎಂಟಿಸಿ ಬಸ್ ಗಳ ಲೋಕಾರ್ಪಣೆ

ಬೆಂಗಳೂರು ನಗರದ ಜನತೆಯ ಅನುಕೂಲಕ್ಕಾಗಿ ಮೊದಲ ಹಂತದಲ್ಲಿ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಇನ್ನೂ ಒಟ್ಟು 840 ನೂತನ‌ ಬಸ್‌ಗಳು ಬಿಎಂಟಿಸಿ ಗೆ ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ ಬಸ್ ಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದಲ್ಲದೆ, ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ ಎಂದರು.

ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಹೇಳಿದರು.

ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ ಎಂದರು.

ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ ಎಂದು ತಿಳಿಸಿದರು.

ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ ಎಂದರು.

ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4-5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್ ಗಳನ್ನು‌ ಖರೀದಿಸಿ ಸವಲತ್ತು ಒದಗಿಸಿದ್ದೇವೆ ಎಂದು ಹೇಳಿದರು.

ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ವಸತಿ ಸಚಿವರಾದ ಜಮೀರ್ ಅಹಮದ್ ಖಾನ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಕೆ.ಕೆ.ಆರ್.ಡಿ.ಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

3 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

3 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

4 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

4 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

7 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

10 hours ago