1000 ಎಲ್ ಇಡಿ ಬೀದಿ ದೀಪಗಳನ್ನು ವಿತರಿಸಿದ ಶಾಸಕ ಧೀರಜ್ ಮುನಿರಾಜ್: ಸಂತಸ ವ್ಯಕ್ತಪಡಿಸಿದ ನಗರಸಭಾ ಸದಸ್ಯರು

ನಗರಸಭೆ ವ್ಯಾಪ್ತಿಯ 31 ವಾರ್ಡ್ ಗಳಲ್ಲಿ ಬೀದಿ ದೀಪಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಧೀರಜ್ ಮುನಿರಾಜ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ನಗರಸಭೆ ಆವರಣದಲ್ಲಿಂದು ನಗರಸಭೆ ಆಡಳಿತಕ್ಕೆ ಎಲ್ ಇಡಿ ಬೀದಿ ದೀಪಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.

2023-24ರ ಶಾಸಕರ ನಿಧಿ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿಯಲ್ಲಿ 15 ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ಸುಮಾರು 1000 ಬೀದಿ ದೀಪಗಳನ್ನು ನಗರಸಭೆ ಅಧ್ಯಕ್ಷೆ ಸುಮಿತ್ರಾ, ಪೌರಾಯುಕ್ತ ಕಾರ್ತಿಕೇಶ್ಚರ್, ನಗರಸಭೆ ಸಮ್ಮುಖದಲ್ಲಿ ನಗರಸಭೆ ಆಡಳಿತಕ್ಕೆ ಹಸ್ತಾಂತರಿಸಲಾಗಿದೆ ಎಂದರು.

ಪ್ರತಿ ವಾರ್ಡ್ ಗೆ 30 ಬೀದಿ ದೀಪಗಳನ್ನು ನೀಡಲು ಸೂಚಿಸಲಾಗಿದೆ. ಇದನ್ನು ಸೂಕ್ತ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ವಾರ್ಡ್ ಗಳಿಗೆ ಎಲ್ ಇಡಿ ಬೀದಿ ದೀಪಗಳನ್ನು ವಿತರಿಸಿರುವುದಕ್ಕೆ ನಗರಸಭಾ ಸದಸ್ಯರು ಸಂತಸ ವ್ಯಕ್ತಪಡಿಸಿದರು. ಈ ವೇಳೆ ಶಾಸಕ ಧೀರಜ್ ಮುನಿರಾಜ್ ಅವರಿಗೆ ಅಭಿನಂದನೆಗಳನ್ನು ಸಹ ಸಲ್ಲಿಸಿದರು.

ಈ ವೇಳೆ ನಗರಸಭೆ ಸದಸ್ಯರಾದ ಬಂತಿ ವೆಂಕಟೇಶ್, ಶಿವು, ಭಾಸ್ಕರ್, ವತ್ಸಲಾ, ವಡ್ಡರಹಳ್ಳಿ ರವಿ, ಪದ್ಮನಾಭ್, ಲಕ್ಣ್ಮೀಪತಿ, ನಾಗರತ್ನ, ಹಂಸಪ್ರಿಯಾ, ಹಸೀನಾ ತಾಜ್, ಪ್ರಭಾ‌ನಾಗಾರಜ್, ನಾಗರತ್ನಮ್ಮ,‌ ಇಂದ್ರಾಣಿ, ಆದಿಲಕ್ಷ್ಮಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

5 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago