101.31 ಲಕ್ಷ ಗ್ರಾಮೀಣ ಕುಟುಂಬಗಳ ಪೈಕಿ 88.06 ಮನೆಗಳಿಗೆ ನಳಸಂಪರ್ಕ- ಸಚಿವ ಪ್ರಿಯಾಂಕ್ ಖರ್ಗೆ

ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಲ ಜೀವನ ಮಿಷನ್ 2.0 ಯೋಜನೆಗೆ ಸಂಬಂಧಿಸಿದ ತಿಳಿವಳಿಕೆ ಪತ್ರ ಸಹಿ ಹಾಕುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಹಾಗೂ ಕೇಂದ್ರ ಜಲ ಶಕ್ತಿ ಸಚಿವರಾದ ಸಿ.ಆರ್. ಪಾಟೀಲ್ ಅವರೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿಡಿಯೋ ಕಾನ್ಫರೆನ್ಸ್  ಸಭೆಯಲ್ಲಿ ಭಾಗವಹಿಸಿದ್ದರು.

ಜಲಜೀವನ್ ಮಿಷನ್ ಯೋಜನೆಯಲ್ಲಿ ಕರ್ನಾಟಕದ ಪ್ರಗತಿಯ ಕುರಿತು ಸಂಕ್ಷಿಪ್ತವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿವರಿಸಿ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಅನುದಾನ ಬಿಡುಗಡೆಯ ಕುರಿತು ಮನವಿ ಮಾಡಿದರು.

➧ ದೇಶದಲ್ಲಿಯೇ ಎರಡನೇ ಅತ್ಯಂತ ಹೆಚ್ಚಿನ ಒಣಭೂಮಿ ಹೊಂದಿರುವ ರಾಜ್ಯವಾದ ಕರ್ನಾಟಕದಲ್ಲಿ ನೀರಿನ ಅಭಾವವಿದೆ. ಇದರೊಂದಿಗೆ ರಾಜ್ಯದ ಹಲವು ಭಾಗಗಳಲ್ಲಿ ಆರ್ಸೆನಿಕ್ ಹಾಗೂ ಫ್ಲೋರೈಡ್ ಮಿಶ್ರಣದ ಸಮಸ್ಯೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಗ್ರಾಮೀಣ ಕುಟುಂಬಗಳಿಗೆ ಕುಡಿಯಲು ಯೋಗ್ಯವಾದ ನೀರನ್ನು ಒದಗಿಸುವ ನಿಟ್ಟಿನಲ್ಲಿ ಜಲಮೂಲಗಳ ಸುಧಾರಣೆ ಮತ್ತು ಬೃಹತ್ ನೀರಿನ ಸರಬರಾಜು ವ್ಯವಸ್ಥೆಗೆ ಆದ್ಯತೆ ನೀಡಲಾಗಿದೆ.

➧ ಕುಡಿಯುವ ನೀರಿನ ಕಾಮಗಾರಿಗಳ ಅನುಷ್ಠಾನದಲ್ಲಿ ಕರ್ನಾಟಕ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ಈ ಯೋಜನೆಯಡಿ ಪ್ರತಿಯೊಂದು ಕಾಮಗಾರಿಗಳನ್ನು ಮೂರನೇ ಸಂಸ್ಥೆ ಮೂಲಕ ಪರಿಶೀಲನೆ ನಡೆಸಲಾಗುತ್ತಿದ್ದು, ಪಾರದರ್ಶಕತೆಗೆ ಒತ್ತು ನೀಡಲಾಗಿದೆ.

➧ ಇದುವರೆಗೆ 101.31 ಲಕ್ಷ ಗ್ರಾಮೀಣ ಕುಟುಂಬಗಳ ಪೈಕಿ 88.06 ಮನೆಗಳಿಗೆ ನಳಸಂಪರ್ಕ ಕಲ್ಪಿಸಿದ್ದು, ಶೇ. 86.93 ರಷ್ಟು ಪ್ರಗತಿ ಸಾಧಿಸಿದ್ದೇವೆ. ಈಗಾಗಲೇ ಕೈಗೊಳ್ಳಲಾಗಿರುವ 66,344 ಕಾಮಗಾರಿಗಳ ಪೈಕಿ ಸುಮಾರು 48,789 ಕಾಮಗಾರಿಗಳು ಭೌತಿಕವಾಗಿ ಪೂರ್ಣಗೊಂಡಿವೆ. ಇದರಲ್ಲಿ ಗ್ರಾಮಗಳಲ್ಲಿ 28,809 ಕಾಮಗಾರಿಗಳು ಗ್ರಾಮಗಳಲ್ಲಿ ಹಾಗೂ 19,980 ಕಾಮಗಾರಿಗಳನ್ನು ಶಾಲೆ, ಅಂಗನವಾಡಿಗಳಲ್ಲಿ ಕೈಗೊಳ್ಳಲಾಗಿದ್ದು, ಗ್ರಾಮೀಣ ಮಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದ್ದೇವೆ.

➧ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ, ಕರ್ನಾಟಕವು ₹17,554.63 ಕೋಟಿ ಬಂಡವಾಳ ಹೂಡಿದೆ. ಇದರಲ್ಲಿ ಕೇಂದ್ರದ ಪಾಲಿನ ನಿರೀಕ್ಷೆಯಲ್ಲಿ ಹೂಡಲಾಗಿರುವ ₹8,880.71 ಕೋಟಿಯೂ ಸೇರಿದ್ದು, ಯೋಜನೆಗಳ ಪೂರ್ಣಗೊಳಿಸುವ ನಿಟ್ಟಿನಲ್ಲಿ ನಮ್ಮ ಬದ್ಧತೆಯನ್ನು ತೋರಿಸುತ್ತದೆ. ಯೋಜನೆ ಅನುಷ್ಠಾನದಲ್ಲಿ ರಾಜ್ಯ ಯಾವುದೇ ರಾಜಿಯಾಗದೆ, ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದ್ದರೂ, ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಲು ವಿಳಂಬ ಮಾಡುತ್ತಿರುವುದು ದುರದೃಷ್ಟಕರ.

➧ ಗುಣಮಟ್ಟ ಖಾತ್ರಿಪಡಿಸಲು ಕರ್ನಾಟಕವು ಬ್ಯೂರೋ ವೆರಿಟಾಸ್ ಸಂಸ್ಥೆಯನ್ನು ಸ್ವತಂತ್ರ ಪರಿಶೀಲನೆ, ಮಾದರಿ ಆಧಾರಿತ ತಪಾಸಣೆ, ದಾಖಲೆಗಳ ಪರಿಶೀಲನೆ ಮತ್ತು ತಾಂತ್ರಿಕ ಪರೀಕ್ಷೆಗಳಿಗಾಗಿ ನೇಮಿಸಿದ್ದು, ತನ್ಮೂಲಕ ಕಾಮಗಾರಿಗಳ ಸುಸ್ಥಿರ ಕಾರ್ಯಶೀಲತೆಯನ್ನು ಖಾತ್ರಿ ಪಡಿಸಲಾಗುತ್ತಿದೆ.

➧ ನೀರಿನ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಇದು ಜ್ಞಾನ ಮತ್ತು ನಿರ್ದೇಶನ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. 259 ಗ್ರಾಮಗಳಿಗೆ ಈಗಾಗಲೇ 24/7 ನೀರಿನ ಸರಬರಾಜು ಸಾಧಿಸಲಾಗಿದೆ.

ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸರ್ಕಾರವು ಬದ್ಧವಾಗಿದೆ. ಮುಂಗಡ ವೆಚ್ಚದ ಮರುಪಾವತಿಗಳು ಸೇರಿದಂತೆ ಬಾಕಿಯಿರುವ ಎಲ್ಲಾ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ನಾವು ಒತ್ತಾಯಿಸುತ್ತೇವೆ. ಎಲ್ಲಾ ಗ್ರಾಮೀಣ ಜನತೆಗೆ ಇದು ನಿರಂತರ ನೀರು ಪೂರೈಕೆಯನ್ನು ಖಚಿತಪಡಿಸುತ್ತದೆ. ಜೊತೆಗೆ ವೇಗ, ಸುರಕ್ಷಿತ ಮತ್ತು ಸುಸ್ಥಿರ ಕುಡಿಯುವ ನೀರಿನ ಹಂಚಿಕೆಯ ರಾಷ್ಟ್ರೀಯ ದೃಷ್ಟಿಕೋನವನ್ನು ಸಾಮೂಹಿಕವಾಗಿ ಸಾಧಿಸಲು ನಮಗೆ ಅನುವು ಮಾಡಿಕೊಡುತ್ತದೆ ಎಂದರು.

Ramesh Babu

Journalist

Recent Posts

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

9 hours ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

10 hours ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

10 hours ago

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

22 hours ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

2 days ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

2 days ago