11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ವಿಶ್ವ ಯೋಗ ದಿನ ಆಚರಣೆ: ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

ಅಂತಾರಾಷ್ಟ್ರೀಯ ಯೋಗ ದಿನವನ್ನು ದೇಶಾದ್ಯಂತ 150ಕ್ಕೂ ಹೆಚ್ಚು ಪ್ರಖ್ಯಾತ ಪ್ರವಾಸಿ ತಾಣಗಳಲ್ಲಿ ಆಚರಿಸಲಾಗುತ್ತಿದೆ. ಅದೇರೀತಿ ಯೋಗದ ಮಹತ್ವ ಪ್ರಚುರ ಪಡಿಸುವ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ವಿಶ್ವ ಯೋಗ ದಿನಾಚರಣಾ ಟ್ರಸ್ಟ್ ನೇತೃತ್ವದಲ್ಲಿ ಇಂದು(ಜೂ. 21ರಂದು) ಬೆಳಗ್ಗೆ 6ಕ್ಕೆ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.

ವಿವಿಧ ಇಲಾಖೆಗಳು ಹಾಗೂ ಯೋಗ ಕೇಂದ್ರಗಳ ಸಹಯೋಗದಲ್ಲಿ ನಡೆದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಸುಮಾರು ಸಾವಿರಕ್ಕೂ ಜನ ಭಾಗವಹಿಸಿದ್ದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಿದ್ದರು.

45 ನಿಮಿಷಗಳ ಕಾಲ ಸಾಮೂಹಿಕವಾಗಿ ಯೋಗಾಭ್ಯಾಸ ನಡೆಸಲಾಯಿತು.

ಯೋಗ ಎಂದರೆ ಶರೀರ, ಮನಸ್ಸು, ಅತ್ಮಗಳ ಸಮಾಗಮ. ಯೋಗದಿಂದ ಸಂಸ್ಕೃತಿ, ನಡೆಯಿಂದ ಒಂದಾಗುವ ಸುಸಂದರ್ಭ ಇದಾಗಿದೆ. ಯೋಗ ದಿನಾಚರಣೆಯಲ್ಲಿ ಶಿಷ್ಟಾಚಾರದ ಯೋಗ, ಪ್ರಾಣಾಯಾಮವನ್ನು ಸಾಮೂಹಿಕವಾಗಿ ಮಾಡುವುದರ ಜೊತೆಗೆ ಶಿಸ್ತುಬದ್ಧ ಬದುಕು ಹೇಗೆ ನಡೆಸುವುದು ಎನ್ನುವುದನ್ನು ಕಲಿಯಬಹುದಾಗಿದೆ.

ಈ ವೇಳೆ ವಿಶ್ವ ಯೋಗಾ ದಿನಾಚರಣೆ ಟ್ರಸ್ಟ್ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಟ್ರಸ್ಟ್ ಗೌರವ ಅಧ್ಯಕ್ಷ ಪುಷ್ಪಾಂಡಜ ದಿವ್ಯಜ್ಞಾನಾನಂದ ಸ್ವಾಮೀಜಿ, ಕಾರ್ಯದರ್ಶಿ ಬಿ.ಜಿ. ಅಮರನಾಥ್, ಉಪಾಧ್ಯಕ್ಷ ಟಿ.ಎನ್.ಪ್ರಭುದೇವ್, ಸಹ ಕಾರ್ಯದರ್ಶಿ ಎಂ.ಕೆ.ವತ್ಸಲಾ, ಖಜಾಂಚಿ ಪಿ.ಕೆ.ಶ್ರೀನಿವಾಸ್, ಸಂಚಾಲಕರಾದ ಡಿ.ವಿ.ಗಿರೀಶ್, ಡಿ.ಪಿ.ಗೋಪಾಲ್, ಸನಾತನಮೂರ್ತಿ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

2 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

13 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

17 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

20 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

22 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago