11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಇಂದು(ಶುಕ್ರವಾರ) ಹೈದರಾಬಾದ್‌ನಲ್ಲಿ ಪ್ರಾರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಮಾಜಿ ಚಾಂಪಿಯನ್ ಬೆಂಗಳೂರು ಬುಲ್ಸ್ ಹಾಗೂ ತೆಲುಗು ಟೈಟಾನ್ಸ್ ತಂಡಗಳ ನಡುವೆ ಕಾದಾಟವಾಗಲಿದೆ. ದಿನದ 2ನೇ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ತಂಡ ಯು ಮುಂಬಾ ವಿರುದ್ಧ ಸೆಣಸಾಡಲಿದೆ.
ಈ ಬಾರಿ ಟೂರ್ನಿಗೆ ಒಟ್ಟು 3 ನಗರಗಳು ಆತಿಥ್ಯ ವಹಿಸಲಿವೆ. ಮೊದಲ ಚರಣದ ಪಂದ್ಯಗಳು ಹೈದರಾಬಾದ್‌ನ ಗಚ್ಚಿಬೌಲಿ ಕ್ರೀಡಾಂಗಣದಲ್ಲಿ ಆಯೋಜನೆಗೊಳ್ಳಲಿವೆ. ಲೀಗ್ ಹಂತದ ಪಂದ್ಯಗಳು ಡಿ.24ರ ವರೆಗೂ ನಡೆಯಲಿದ್ದು, ಒಟ್ಟು 132 ಪಂದ್ಯಗಳು ನಡೆಯಲಿವೆ. ಟೂರ್ನಿಯ ಪ್ಲೇ-ಆಫ್ ಪಂದ್ಯಗಳ ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ.
ಟೂರ್ನಿಯಲ್ಲಿ ಒಟ್ಟು 12 ತಂಡಗಳು ಪಾಲ್ಗೊಳ್ಳಲಿದ್ದು, ಲೀಗ್ ಹಂತದಲ್ಲಿ ತಲಾ 2 ಬಾರಿ ಪರಸ್ಪರ ಸೆಣಸಾಡಲಿವೆ. ಲೀಗ್ ಹಂತ ಮುಕ್ತಾಯದ ಬಳಿಕ ಅಗ್ರ-6 ತಂಡಗಳು ಪ್ಲೇ-ಆಫ್ ಪ್ರವೇಶಿಸಲಿವೆ. ಪ್ರತಿ ದಿನವೂ 2 ಪಂದ್ಯಗಳು ಆಯೋಜನೆಗೊಳ್ಳಲಿದ್ದು, ಮೊದಲ ಪಂದ್ಯ ರಾತ್ರಿ 8 ಗಂಟೆಗೆ, 2ನೇ ಪಂದ್ಯ ರಾತ್ರಿ 9 ಗಂಟೆಗೆ ಶುರುವಾಗಲಿದೆ
ಟೂರ್ನಿ ಈ ಬಾರಿ 3 ನಗರಗಳ ಕ್ಯಾರವಾನ್ ಮಾದರಿಯಲ್ಲಿ ಹೈದರಾಬಾದ್, ನೋಯ್ಡಾ ಹಾಗೂ ಪುಣೆಯಲ್ಲಿ ನಡೆಯಲಿವೆ. ಅ.18ರಿಂದ ನ.9ರ ವರೆಗೆ ಹೈದರಾಬಾದ್‌ನಲ್ಲಿ ಪಂದ್ಯಗಳು ನಡೆಯಲಿವೆ. ಬಳಿಕ ನ.10ರಿಂದ ಡಿ.1ರ ವರೆಗೆ ನೋಯ್ಡಾ ಹಾಗೂ ಡಿ.3ರಿಂದ 24ರ ವರೆಗೆ ಪುಣೆಯಲ್ಲಿ ಆಯೋಜನೆಗೊಳ್ಳಲಿವೆ. ಈ ಬಾರಿ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯುವುದಿಲ್ಲ.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…