11 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಟ್ಟಡ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ಆಧುನಿಕ ಮೂಲಭೂತ ಸೌಕರ್ಯಗಳೊಂದಿಗೆ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ದೇವನಹಳ್ಳಿ ತಾಲ್ಲೂಕು ಪಂಚಾಯಿತಿಯಡಿ ದೇವನಹಳ್ಳಿ ತಾಲ್ಲೂಕು ಅಣ್ಣೇಶ್ವರ ಗ್ರಾಮ ಪಂಚಾಯಿತಿ ಸಮಗ್ರ ಅಭಿವೃದ್ಧಿ ಯೋಜನೆಯಡಿ ವಿವಿಧ ಕಟ್ಟಡ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು.

ಗ್ರಾಮಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳು ಉತ್ತಮವಾಗಿದ್ದರೆ ಅಂತಹ ಗ್ರಾಮಗಳು ಅಭಿವೃದ್ಧಿಯಾಗುತ್ತವೆ. ಗ್ರಾಮ ಸಡಕ್ , ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಹಲವು ಅಭಿವೃದ್ಧಿ ಕಾರ್ಯಗಳು ಆಗುತ್ತಿವೆ. ಕೆರೆ ಒತ್ತುವರಿ ತೆರವು, ಕೆರೆ ಹೂಳೆತ್ತುವ ಕಾರ್ಯಕ್ರಮ, ಪ್ರತಿಯೊಬ್ಬ ವಿದ್ಯಾರ್ಥಿಗೆ ಗುಣಮಟ್ಟದ ಶಿಕ್ಷಣ ನೀಡುವ ಹಿತದೃಷ್ಟಿಯಿಂದ ಸಿ.ಎಸ್. ಆರ್ ಅನುದಾನದಡಿ ಸರ್ಕಾರಿ ಶಾಲೆಗಳ ನವೀಕರಣ ಮಾಡುವ ಕಾರ್ಯಗಳು ಈಗಾಗಲೇ ಪ್ರಾರಂಭ ಮಾಡಲಾಗಿದೆ ಎಂದರು.

ಅಣ್ಣೇಶ್ವರ ಗ್ರಾಮಪಂಚಾಯಿತಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹತ್ತಿರ ಇರುವುದರಿಂದ ಬಹಳಷ್ಟು ಅಭಿವೃದ್ಧಿ ಕಂಡಿದೆ. ಇಂದು ಅಣ್ಣೇಶ್ವರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ  ಸುಮಾರು 11 ಕೋಟಿ ರೂಗಳ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಾಗಿದೆ. ಗ್ರಾಮ ಪಂಚಾಯಿತಿಗಳಿಗೆ ಬರುವ ತೆರಿಗೆ ಹಣ ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಂಡರೆ ಅಭಿವೃದ್ಧಿ ಸಾಧ್ಯ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳು ಆಲಿಸಿ, ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು, ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು ಸಚಿವರು ಹೇಳಿದರು.

ಕಾರ್ಯಕ್ರಮದಲ್ಲಿ ಅಣ್ಣೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮಾ ಮುನಿರಾಜು, ಉಪಾಧ್ಯಕ್ಷ ಮುನಿರಾಜಪ್ಪ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ದೇವನಹಳ್ಳಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಚೆನ್ನಳ್ಳಿ ರಾಜಣ್ಣ, ಮಾಜಿ ಸದಸ್ಯ ಕೆ.ಸಿ ಮಂಜುನಾಥ್, ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಜಗನ್ನಾಥ, ದೇವನಹಳ್ಳಿ ಮಾಜಿ ಪುರಸಭೆ ಅಧ್ಯಕ್ಷ ಎಂ ನಾರಾಯಣ ಸ್ವಾಮಿ, ಅಣ್ಣೇಶ್ವರ ಗ್ರಾಮಪಂಚಾಯಿತಿ ಸದಸ್ಯರು, ಚುನಾಯಿತ ಜನಪ್ರತಿನಿಧಿಗಳು, ಮುಖಂಡರು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

2 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

17 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago