ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ, ಇಂಗ್ಲೀಷ್ ಕ್ಯಾಲೆಂಡರ್ ನಂತೆ ಇಂದು ಪ್ರಾರಂಭವಾಗುವ ಹೊಸ ವರ್ಷವನ್ನು ವಿಶ್ವದಾದ್ಯಂತ ಸಂಭ್ರಮಾಚರಣೆಯಿಂದ ಸ್ವಾಗತಿಸಲಾಗುತ್ತದೆ. 2026ರ ವರ್ಷ ರಾಜ್ಯಕ್ಕೆ ಸಮೃದ್ಧಿಯನ್ನು ತರಲಿ ಹಾಗೂ ರಾಜ್ಯದ ಜನತೆ ಸುಖ, ಸಮೃದ್ಧಿ, ಶಾಂತಿಯಿಂದಿರಲಿ, ಬಡವರ ಹಾಗೂ ರೈತರ ಮೊಗದಲ್ಲಿ ಸಂತೋಷ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಹೊಸ ವರ್ಷದ ಪ್ರಯುಕ್ತ ಸರ್ಕಾರದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಶುಭ ಹಾರೈಸಿ, ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತಮ ಮಳೆ – ಬೆಳೆಯಿಂದ ಹೆಚ್ಚಿನ ಸಮಸ್ಯೆ ಪರಿಹಾರವಾಗುತ್ತದೆ. 2025 ರಲ್ಲಿ ಭಾರೀ ಮಳೆಯಾದ ಜೊತೆಗೆ ಬೆಳೆಹಾನಿಯೂ ಸಂಭವಿಸಿತು. 12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ. ಕೇಂದ್ರ ಸರ್ಕಾರ ಎನ್ ಡಿಆರ್ ಎಫ್ ನಿಂದ ಹಾಗೂ ರಾಜ್ಯ ಸರ್ಕಾರ ಎಸ್ ಡಿ ಆರ್ ಎಫ್ ನಿಂದ ಪರಿಹಾರವನ್ನು ನೀಡುತ್ತದೆ. ರೈತರಿಗೆ ಹೆಚ್ಚಿನ ಪರಿಹಾರಗಳನ್ನು ಒದಗಿಸುವ ಮೂಲಕ ಅವರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ರೈತರ ಹಾಗೂ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿರುತ್ತದೆ. 2025 ರಲ್ಲಿ ಖುಷ್ಕಿ, ನೀರಾವರಿ ಸೇರಿದಂತೆ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 8,500 ರೂ ಪರಿಹಾರ ನೀಡಲಾಗಿದ್ದು, ರೈತರಿಗೆ ತುಸು ನೆಮ್ಮದಿ ಕಾಣುವಂತಾಗಿದೆ ಎಂದು ಹೇಳಿದರು.
ವಿರೋಧ ಪಕ್ಷಗಳು ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಕಷ್ಟಸುಖಗಳಿಗೆ ಸ್ಪಂದಿಸಲು ಹೆಚ್ಚಿನ ಆದ್ಯತೆ ನೀಡಬೇಕಿದೆ. ರಾಜ್ಯದ ಎಲ್ಲ ಜನತೆಗೆ ನ್ಯಾಯ ಒದಗಿಸುವುದು ಅವಶ್ಯ. ಜನರಿಗೆ ಅವಶ್ಯವಿರುವ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸಬೇಕು. ವಿಳಂಬ ನೀತಿ ಅನುಸರಿಸುವುದೂ ಒಂದು ರೀತಿಯ ಅಪರಾಧವೇ ಆಗಿದೆ ಎಂದರು.
ಹೊಸ ವರ್ಷ ಜನರ ಕೆಲಸ ನಿರ್ವಹಿಸಲು ಹೊಸ ಉತ್ಸಾಹದಿಂದ ಶ್ರಮಿಸಬೇಕು. ಅಧಿಕಾರಿಗಳು 30-40 ವರ್ಷಗಳು ಅಧಿಕಾರದಲ್ಲಿದ್ದರೆ, ನಾವು ಅಧಿಕಾರದಲ್ಲಿ ಐದು ವರ್ಷಗಳು ಇರುತ್ತೇವೆ. ರಾಜ್ಯದ ಜನರು ನಿನ್ನೆ ಮತ್ತು ಇಂದು ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ನೂತನ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಅತ್ಯಂತ ಶ್ರಮವಹಿಸಿ ಕಾರ್ಯನಿರ್ವಹಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಸಂಭ್ರಮಾಚರಣೆ ನಡೆದಿದೆ. ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿರುವ ಇಲಾಖೆಗೆ ಅಭಿನಂದನೆಗಳು ಎಂದು ತಿಳಿಸಿದರು.
ರಾಜ್ಯದ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು. ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದರು.
ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ…
ಇಂದು ಬೆಂಗಳೂರಿನ ಎಸ್ಪಿ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ಅಧಿಕಾರ ವಹಿಸಿಕೊಂಡಿದ್ದಾರೆ.... ಬೆಂಗಳೂರು…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಅಜಾಕ್ಸ್ ಶಾಲೆ ಹಿಂಭಾಗ ಶವ ಪತ್ತೆಯಾಗಿದೆ... ಮೃತ ದುರ್ದೈವಿಯನ್ನು ಒರಿಸ್ಸಾ ಮೂಲದ ಸುಮಂತ್(24) ಎಂದು ಗುರುತಿಸಲಾಗಿದೆ....…
ಏನೇನು ಅವತಾರಗಳೋ, ಅಬ್ಬಬ್ಬಾ......... ಹೊಸ ವರ್ಷವೆಂಬ ಸಂಭ್ರಮ ಮತ್ತು ಉನ್ಮಾದ........... ಸಾವಿರಾರು ಪೋಲೀಸರ ಬಿಗಿ ಬಂದೋ ಬಸ್ತ್, ದ್ರೋಣ್ ಕ್ಯಾಮರಾದ…
ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ…
ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ…