12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ: ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ- ಸಿಎಂ ಸಿದ್ದರಾಮಯ್ಯ

ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ, ಇಂಗ್ಲೀಷ್ ಕ್ಯಾಲೆಂಡರ್ ನಂತೆ ಇಂದು ಪ್ರಾರಂಭವಾಗುವ ಹೊಸ ವರ್ಷವನ್ನು ವಿಶ್ವದಾದ್ಯಂತ ಸಂಭ್ರಮಾಚರಣೆಯಿಂದ ಸ್ವಾಗತಿಸಲಾಗುತ್ತದೆ. 2026ರ ವರ್ಷ ರಾಜ್ಯಕ್ಕೆ ಸಮೃದ್ಧಿಯನ್ನು ತರಲಿ ಹಾಗೂ ರಾಜ್ಯದ ಜನತೆ ಸುಖ, ಸಮೃದ್ಧಿ, ಶಾಂತಿಯಿಂದಿರಲಿ, ಬಡವರ ಹಾಗೂ ರೈತರ ಮೊಗದಲ್ಲಿ ಸಂತೋಷ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಹೊಸ ವರ್ಷದ ಪ್ರಯುಕ್ತ ಸರ್ಕಾರದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಶುಭ ಹಾರೈಸಿ, ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತಮ ಮಳೆ – ಬೆಳೆಯಿಂದ ಹೆಚ್ಚಿನ ಸಮಸ್ಯೆ ಪರಿಹಾರವಾಗುತ್ತದೆ. 2025 ರಲ್ಲಿ ಭಾರೀ ಮಳೆಯಾದ ಜೊತೆಗೆ ಬೆಳೆಹಾನಿಯೂ ಸಂಭವಿಸಿತು. 12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ. ಕೇಂದ್ರ ಸರ್ಕಾರ ಎನ್ ಡಿಆರ್ ಎಫ್ ನಿಂದ ಹಾಗೂ ರಾಜ್ಯ ಸರ್ಕಾರ ಎಸ್ ಡಿ ಆರ್ ಎಫ್ ನಿಂದ ಪರಿಹಾರವನ್ನು ನೀಡುತ್ತದೆ. ರೈತರಿಗೆ ಹೆಚ್ಚಿನ ಪರಿಹಾರಗಳನ್ನು ಒದಗಿಸುವ ಮೂಲಕ ಅವರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ರೈತರ ಹಾಗೂ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿರುತ್ತದೆ. 2025 ರಲ್ಲಿ ಖುಷ್ಕಿ, ನೀರಾವರಿ ಸೇರಿದಂತೆ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 8,500 ರೂ ಪರಿಹಾರ ನೀಡಲಾಗಿದ್ದು, ರೈತರಿಗೆ ತುಸು ನೆಮ್ಮದಿ ಕಾಣುವಂತಾಗಿದೆ ಎಂದು ಹೇಳಿದರು.

ವಿರೋಧ ಪಕ್ಷಗಳು ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಕಷ್ಟಸುಖಗಳಿಗೆ ಸ್ಪಂದಿಸಲು ಹೆಚ್ಚಿನ ಆದ್ಯತೆ ನೀಡಬೇಕಿದೆ. ರಾಜ್ಯದ ಎಲ್ಲ ಜನತೆಗೆ ನ್ಯಾಯ ಒದಗಿಸುವುದು ಅವಶ್ಯ. ಜನರಿಗೆ ಅವಶ್ಯವಿರುವ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸಬೇಕು. ವಿಳಂಬ ನೀತಿ ಅನುಸರಿಸುವುದೂ ಒಂದು ರೀತಿಯ ಅಪರಾಧವೇ ಆಗಿದೆ ಎಂದರು.

ಹೊಸ ವರ್ಷ ಜನರ ಕೆಲಸ ನಿರ್ವಹಿಸಲು ಹೊಸ ಉತ್ಸಾಹದಿಂದ ಶ್ರಮಿಸಬೇಕು. ಅಧಿಕಾರಿಗಳು 30-40 ವರ್ಷಗಳು ಅಧಿಕಾರದಲ್ಲಿದ್ದರೆ, ನಾವು ಅಧಿಕಾರದಲ್ಲಿ ಐದು ವರ್ಷಗಳು ಇರುತ್ತೇವೆ. ರಾಜ್ಯದ ಜನರು ನಿನ್ನೆ ಮತ್ತು ಇಂದು ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ನೂತನ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಅತ್ಯಂತ ಶ್ರಮವಹಿಸಿ ಕಾರ್ಯನಿರ್ವಹಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಸಂಭ್ರಮಾಚರಣೆ ನಡೆದಿದೆ. ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿರುವ ಇಲಾಖೆಗೆ ಅಭಿನಂದನೆಗಳು ಎಂದು ತಿಳಿಸಿದರು.

ರಾಜ್ಯದ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು. ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದರು.

Ramesh Babu

Journalist

Recent Posts

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

4 hours ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

24 hours ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

1 day ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

3 days ago