ಸುಮಾರು 12 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ನಿನ್ನೆ(ಮೇ.29) ಬೆಳಗ್ಗೆ ಸುಮಾರು 10ಗಂಟೆ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಶ್ರೀನಗರದಲ್ಲಿ ನಡೆದಿದೆ…
ಘಟನೆ ತಡವಾಗಿ ಬೆಳಕಿಗೆ ಬಂದಿದೆ….
ಬಿಹಾರ ಮೂಲದ ಚಾಂದಿನಿ ಕುಮಾರಿ(12), ನೇಣಿಗೆ ಶರಣಾದ ಬಾಲಕಿ.
ತಂದೆ ಧಮೇಂದ್ರ, ತಾಯಿ ಹಾಗೂ ಒಂದು ಹೆಣ್ಣು, ಒಂದು ಗಂಡು ಮಗು ಸಮೇತ ಬಿಹಾರದಿಂದ ದೊಡ್ಡಬಳ್ಳಾಪುರ ನಗರಕ್ಕೆ ಬಂದು ಶ್ರೀನಗರದಲ್ಲಿ ಮನೆ ಮಾಡಿಕೊಂಡು ವಾಸವಿದ್ದರು ಎನ್ನಲಾಗಿದೆ.
ಮೃತಳ ತಂದೆ ಧಮೇಂದ್ರ ರೈಲ್ವೆ ನಿಲ್ದಾಣದಲ್ಲಿ ಸಿಮೆಂಟ್ ಇಳಿಸುವ ಕಾರ್ಮಿಕನಾಗಿ ಕೆಲಸ ಮಾಡುತ್ತಿರುತ್ತಾನೆ. ತಾಯಿ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿರುತ್ತಾರೆ. ಸುಮಾರು 7 ವರ್ಷದ ಗಂಡು ಮಗು ಸಹ ಇದೆ.
ಚಾಂದಿನಿ ಕುಮಾರಿ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ತಂದೆ ತಾಯಿ ಕೆಲಸಕ್ಕೆ ಹೋದ ಕೂಡಲೇ ಮನೆ ಬಾಗಿಲು ಹಾಕಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ….
ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…