124 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್; ದೊಡ್ಡಬಳ್ಳಾಪುರದಿಂದ ಟಿ.ವೆಂಕಟರಮಣಯ್ಯ; ದೇವನಹಳ್ಳಿಯಿಂದ ಕೆ.ಹೆಚ್.ಮುನಿಯಪ್ಪ ಕಣಕ್ಕೆ

2023ರ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಳೆದು ತೂಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಮಾಡಲಿದ್ದು. ಕೋಲಾರ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಇನ್ನೂ ಬಿಡುಗಡೆ ಮಾಡಿಲ್ಲ.

ಸಾಕಷ್ಟು ಕುತೂಹಲ ಕೆರಳಿಸಿದ್ದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಗೊಂದಲಕ್ಕೆ ಹಾಲಿ ಶಾಸಕ ಟಿ.ವೆಂಕಟರಮಣಯ್ಯಗೆ ಟಿಕೆಟ್ ಘೋಷಣೆ ಆಗಿರುವುದರಿಂದ ಪೂರ್ಣವಿರಾಮ ಹಾಕಿದೆ.

ಶಾಸಕ ಟಿ.ವೆಂಕಟರಮಣಯ್ಯಗೆ ಟಿಕೆಟ್ ನೀಡಬಾರದು ಎಂದು ತೀವ್ರವಾಗಿ ವಿರೋಧಿಸಿದ್ದ ಸ್ವಾಭಿಮಾನಿ ಕಾಂಗ್ರೆಸ್ ಬಳಗ. ಕೊನೆಗೂ ಮೊದಲ ಪಟ್ಟಿಯಲ್ಲಿ ಹಾಲಿ ಶಾಸಕರಿಗೆ ಗ್ರೀನ್ ಸಿಗ್ನಲ್ ನೀಡಿರುವುದು ಬಾರಿ ಕುತೂಹಲಕ್ಕೆ ಕಾರಣವಾಗಿದೆ. ಮುಂದೆ ಸ್ವಾಭಿಮಾನಿ ಕಾಂಗ್ರೆಸ್ ಬಳಗದ ನಡೆ ಯಾವ ರೀತಿ ಇರುತ್ತೆ ಎಂಬುದು ಕಾದು ನೋಡಬೇಕಿದೆ.

ಈ ಬಾರಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ತಮ್ಮ ತಮ್ಮ ಕ್ಷೇತ್ರದಲ್ಲಿ ಗೆಲ್ಲುವ ಲೆಕ್ಕಾಚಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಸದ್ಯ ಬಿಡುಗಡೆಯಾಗಿರುವ 124 ಕ್ಷೇತ್ರಗಳಲ್ಲಿ 100 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ, ಅದರ ಆಧಾರದ ಮೇಲೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿದೆ.

Leave a Reply

Your email address will not be published. Required fields are marked *