ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ವಿದ್ಯಾರ್ಧಿಗಳಿಗೆ ಲ್ಯಾಪ್ ಟಾಪ್ ವಿತರಿಸುವುದು ನಿಮ್ಮ ಅಭ್ಯಾಸಕ್ಕೆ ಸಹಾಯವಾಗಲೆಂದು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಉತ್ತಮ ಅಭ್ಯಾಸ ಮಾಡಬೇಕು. ಅದನ್ನು ಬಿಟ್ಟು ವಿಡಿಯೋಗಳನ್ನು ನೋಡಿಕೊಂಡು ಗೇಮ್ ಆಡುವುದಕ್ಕಲ್ಲ ವಾಮಮಾರ್ಗ ಹಿಡಿದು ದಾರಿ ತಪ್ಪುವುದು ಬೇಡ ಎಂದು ಶಾಸಕ ಕೊತ್ತೂರು ಮಂಜುನಾಥ್ ವಿಧ್ಯಾರ್ಥಿಗಳಿಗೆ ಕವಿ ಮಾತು ಹೇಳಿದರು

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸರಕಾರ ಹಾಗೂ ಕಾರ್ಮಿಕ ಇಲಾಖೆಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಅವರು, ಸರಕಾರವು ವಿಧ್ಯಾರ್ಥಿಗಳಿಗೆ ಓದಲು ಪೂರಕವಾದ ವಾತಾವರಣವನ್ನು ಸೃಷ್ಟಿಸುವ ಉದ್ದೇಶದಿಂದ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಇದರ ಸದುಪಯೋಗ ಪಡೆಸಿಕೊಂಡು ಉತ್ತಮ ಅಭ್ಯಾಸದ ಜೊತೆಗೆ ತಂದೆತಾಯಿಗೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು ಎಂದರು‌

ಕಟ್ಟಡ ಕಾರ್ಮಿಕರು ದಿನನಿತ್ಯ ಕಷ್ಟಪಟ್ಟು ದುಡಿಯುತ್ತಾರೆ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳತ್ತಾರೆ ಶ್ರೀಮಂತರ ಮಕ್ಕಳು ಖಾಸಗಿ ಶಾಲಾ ಕಾಲೇಜುಗಳಲ್ಲಿ ಓದಿದ್ದರೂ ಸರಕಾರಿ ಶಾಲಾ ಕಾಲೇಜುಗಳಲ್ಲಿ ಓದಿ ಪೈಪೋಟಿ ನೀಡುವಂತಾಗಿದ್ದಾರೆ ಕಷ್ಟ ಪಟ್ಟು ಪ್ರಯತ್ನ ಪಟ್ಟರೆ ಖಂಡಿತವಾಗಿ ಪ್ರತಿಫಲ ಇದ್ದೇ ಇರುತ್ತದೆ ಸಂವಿಧಾನದ ಹಕ್ಕುಗಳ ಜಾರಿಗಾಗಿ ಸಮಾಜಕ್ಕೆ ಏನಾದರೂ ಕೊಡುಗೆ ನೀಡುವಂತವರು ಆಗಿ ನೀವು ಎಲ್ಲರೂ ಬೆಳೆಯಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಕಾರ್ಮಿಕರ ಮಕ್ಕಳು ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಓದಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ವಿದ್ಯೆ ಕಲೆ ಎಂಬುದು ಯಾರ ಒಬ್ಬರ ಸ್ವತ್ತು ಅಲ್ಲ ಎಲ್ಲರಿಗೂ ಸಿಗುತ್ತದೆ ವಿದ್ಯಾರ್ಥಿಗಳು ಮುಂದಿನ ಭವಿಷ್ಯದ ಗುರಿ ಇಟ್ಟುಕೊಂಡು ಹೋಗಬೇಕು ಅವಾಗ ಮಾತ್ರವೇ ಉನ್ನತ ಸ್ಥಾನಮಾನವನ್ನು ಪಡೆಯಲು ಸಾಧ್ಯವಾಗುತ್ತದೆ ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದರೆ ಮಾತ್ರ ಉದ್ಯೋಗ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಕಾರ್ಮಿಕ ನೀರಿಕ್ಷಕರಾದ ರಾಜೇಶ್ವರಿ ಮಾತನಾಡಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸರಕಾರ ಮತ್ತು ಕಾರ್ಮಿಕ ಇಲಾಖೆಯ ವತಿಯಿಂದ ಲ್ಯಾಪ್‌ಟಾಪ್ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು ತಾಲೂಕಿನಲ್ಲಿ ಸುಮಾರು 680 ಅರ್ಜಿಗಳಲ್ಲಿ 168 ಅರ್ಜಿಗಳನ್ನು ಪರಿಶೀಲನೆ ಮಾಡಿ ಅದರಲ್ಲೂ 41 ನೈಜ ಕಟ್ಟಡ ಕಾರ್ಮಿಕರನ್ನು ಗುರುತಿಸಲಾಗಿತ್ತು ಎಸ್.ಎಸ್.ಎಲ್.ಸಿ ಯಲ್ಲಿ ಅತಿಹೆಚ್ಚು ಅಂಕ ಗಳಿಸಿದ 33 ಮಕ್ಕಳನ್ನು ಆಯ್ಕೆ ಮಾಡಿ ತಿತರಿಸಲಾಗುತ್ತಾ ಇದೆ ಎಂದು ವಿವರಿಸಿದರು ಈ ಸಂದರ್ಭದಲ್ಲಿ ತಾಪಂ ಇಒ ಮುನಿಯಪ್ಪ ಮುಂತಾದವರು ಇದ್ದರು

Leave a Reply

Your email address will not be published. Required fields are marked *