13 ಸಾವಿರ ಎನ್.ಪಿ.ಎಸ್ ನೌಕರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ: ಹೊಸ‌ ಪಿಂಚಣಿ(NPS) ರದ್ದು: ಹಳೆ ಪಿಂಚಣಿ(OPS) ಯೋಜನೆ ಜಾರಿ

ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೊಸ ಪಿಂಚಣಿ ಯೋಜನೆ(ಎನ್ ಪಿಎಸ್)ಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.

2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ.

ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿ ನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *