Categories: ಹವಾಮಾನ

14.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯಲಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಜೂನ್ 14ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್ 19ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 18ರ ತನಕ ಸಾಮಾನ್ಯ ಮುಂಗಾರು ಮುಂದುವರಿಯುವ ಲಕ್ಷಣಗಳಿದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ದಕ್ಷಿಣ ಒಳನಾಡಿನ ಮೈಸೂರು ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಜೂನ್ 18ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.

ಉತ್ತರ ಒಳನಾಡು ಉತ್ತರ ಭಾಗ ಹಾಗೂ ದಕ್ಷಿಣ ಮಹಾರಾಷ್ಟ್ರ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ ಉತ್ತರ ಒಳನಾಡಿನ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಹಾಗೂ ಮಹಾರಾಷ್ಟ್ರ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ.
ನಂತರ ಮುಂಗಾರು ಯಥಾಸ್ಥಿತಿಗೆ ಮರಳುವ ಸಾಧ್ಯತೆಯಿದೆ. ( ನೈರುತ್ಯದಿಂದ ಈಶಾನ್ಯಕ್ಕೆ).
ಜೂನ್ 14ರಿಂದ ಕೊಡಗು, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ನಿರೀಕ್ಷೆ ಇದೆ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

9 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

14 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

17 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago