ದೊಡ್ಡಬಳ್ಳಾಪುರ: ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ, ಮೊಬೈಲ್ ಹಾಗೂ ಹಣ ದೋಚುತ್ತಿದ್ದ ಮೂವರು ಐನಾತಿ ಖದೀಮರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಯಲಹಂಕ ತಾಲೂಕಿನ ಚಿಕ್ಕಜಾಲದ ರಂಗಸ್ವಾಮಿ ಕ್ಯಾಂಪಿನ ನಿವಾಸಿ ಆಕಾಶ್(19), ಟೆಲಿಕಾಂ ಲೇಔಟ್ ನಿವಾಸಿ ಪ್ರವೀಣ್(18) ಹಾಗೂ ಜಾಲ ಹೋಬಳಿಯ ಮಾರನಾಯಕನಹಳ್ಳಿ ನಿವಾಸಿ ಹನುಮಂತ ಎಸ್.ಡಿ (22) ಬಂಧಿತ ಆರೋಪಿಗಳು.
ಏ.14 ರಂದು ರಾತ್ರಿ 11;30ರ ಸುಮಾರಿಗೆ ತಾಲೂಕಿನ ಆಲೂರು ದುದ್ದನಹಳ್ಳಿ ನಿವಾಸಿ ಅಮರ್ ಹಾಗೂ ಕೋಡಿಹಳ್ಳಿ ನಿವಾಸಿ ಅನಿಲ್ ಎಂಬುವರು ಬೈಕಿನಲ್ಲಿ ಸೊಣ್ಣಪ್ಪನಹಳ್ಳಿಗೆ ಮಾರ್ಗವಾಗಿ ಹೋಗುತ್ತಿದ್ದಾಗ ಮೂವರು ಆರೋಪಿಗಳು ವಾಹನ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಬೆದರಿಸಿದ್ದಾರೆ.
ಆಗ ಬೈಕ್ ಸವಾರರಿಬ್ಬರು ತಮ್ಮ ಬಳಿಯಿದ್ದ ಮೊಬೈಲ್, ಹಣ ಕೊಡಲು ಹೋದಾಗ ಸುತ್ತಲಿನ ಗ್ರಾಮಗಳ ಜನರು ತಕ್ಷಣ ಆಗಮಿಸಿ, ಆರೋಪಿಗಳನ್ನು ಹಿಡಿದು ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
ಅರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ 4.20 ಲಕ್ಷ ರೂ. ಬೆಲೆ ಬಾಳುವ ವಿವಿಧ ಕಂಪನಿಗಳ 20 ಮೊಬೈಲ್ ಪೋನ್ ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಸರ್ಕಲ್ ಇನ್ ಸ್ಪೆಕ್ಟರ್ ಸಾದಿಕ್ ಪಾಷಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಆರೋಪಿಗಳಿಂದ ವಶಪಡಿಸಿಕೊಂಡಿರುವ ಮೊಬೈಲ್ ಗಳನ್ನು ಪರಿಶೀಲಿಸಿ ವಾರಸುದಾರರಿಗೆ ಒಪ್ಪಿಸಲಾಗುವುದು ಎಂದು ಅವರು ಹೇಳಿದರು.
ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಎಸ್ಪಿ ಪುರುಷೋತ್ತಮ್, 2ನೇ ಹೆಚ್ಚುವರಿ ಎಸ್ಪಿ ನಾಗರಾಜ್ ಕೆ.ಎಸ್., ಡಿವೈಎಸ್ಪಿ ಪಿ.ರವಿ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.
ತನಿಖಾ ತಂಡದಲ್ಲಿ ಪಿಎಸ್ಐ ರವಿ ಟಿ.ಎನ್, ಸಿಬ್ಬಂದಿ ಅರ್ಜುನ್ ಲಮಾಣಿ, ಪ್ರವೀಣ್, ಸಚಿನ್ ಉಪ್ಪಾರ್, ಲಕ್ಷ್ಮೀಪತಿ ಅವರು ಆರೋಪಿಗಳಿಂದ ಹೆಚ್ಚಿನ ಮಾಲು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…