16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿರುವ ಖ್ಯಾತ ನಟ ಕಿಶೋರ್ ಕುಮಾರ್. ಜಿ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆಗಳನ್ನು ತಿಳಿಸಿದ್ದಾರೆ.
“ಸರ್ವ ಜನಾಂಗದ ಶಾಂತಿಯ ತೋಟ” ಎಂಬ ಘೋಷವಾಕ್ಯದಡಿ ಈ ಬಾರಿಯ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದ್ದು, ಈ ಸಾಲುಗಳಿಗೆ ಬದ್ಧವಾಗಿರುವ ಕಿಶೋರ್ ಅವರ ಮುಂದಾಳತ್ವದಲ್ಲಿ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.