16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವಂತಿಲ್ಲ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

2026-27ನೇ ಸಾಲಿನ ಬಜೆಟ್‌ ಮಂಡನೆ ವೇಳೆ ಮಾತನಾಡಿದ ಅವರು, ಹೆಚ್ಚುತ್ತಿರುವ ಮೊಬೈಲ್‌ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು ತಿಳಿಸಿದರು.

ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು, ವಿಶ್ವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದರು.

Ramesh Babu

Journalist

Recent Posts

ನಿಗದಿಯಂತೆ ಭಾನುವಾರವೇ ಶ್ರೀರಾಮ ಶೋಭಾಯಾತ್ರೆ ಆಚರಣೆ

ನಾಳೆ (ಭಾನುವಾರ) ನಡೆಯಬೇಕಿದ್ದ ಶ್ರೀರಾಮ ಶೋಭಾಯಾತ್ರೆ ಆಚರಣೆಗೆ ಡಿಜೆ ಬಳಕೆ ಅನುಮತಿ ವಿಚಾರದಲ್ಲಿ ಪೊಲೀಸ್ ಇಲಾಖೆ ಮತ್ತು ಆಯೋಜಕರಾದ ಬಜರಂಗದಳ…

3 hours ago

ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ವಿ.ವರಲಕ್ಷ್ಮಿ ವರ್ಗಾವಣೆ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ತನಿಖಾಧಿಕಾರಿಯಾಗಿದ್ದ ಸಬ್ ಇನ್ಸ್ ಪೆಕ್ಟರ್ ವಿ.ವರಲಕ್ಷ್ಮಿ ಅವರು ವರ್ಗಾವಣೆಗೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ…

5 hours ago

ಶ್ರೀರಾಮ ಶೋಭಾಯಾತ್ರೆ: ಡಿಜೆ ಅನುಮತಿಗಾಗಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಶ್ರೀರಾಮ ಶೋಭಾಯಾತ್ರೆಗೆ ಡಿಜೆ ಪರ್ಮಿಷನ್ ಕೊಡುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ನಗರದ ಡಿವೈಎಸ್ಪಿ ಕಚೇರಿ ಎದುರು ಶ್ರೀರಾಮ ಭಜನೆ ಮಾಡುತ್ತಾ ಹಿಂದೂ…

6 hours ago

ಬಿರಿಯಾನಿಗಾಗಿ ಮಿಡ್ ನೈಟ್ ರೈಡ್ ಬಂದವರು ದುರ್ಮರಣ

ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು - ಮಂಗಳೂರು…

11 hours ago

ಘಾಟಿ ಸುಬ್ರಹ್ಮಣ್ಯ ದೇಗುಲ ಸಮೀಪ ಚಿರತೆ ಪ್ರತ್ಯಕ್ಷ: ಬೆಚ್ಚಿಬಿದ್ದ ಜನ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲ ಕೂಗಳತೆ ದೂರದಲ್ಲೇ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ...…

16 hours ago

111.355 ಕೆ.ಜಿ ಗಾಂಜಾ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ…

1 day ago