ಬೆಂಗಳೂರು: 160 ಕೆಜಿ ತೂಕ ಹೊಂದಿದ್ದ 35 ವರ್ಷದ ವ್ಯಕ್ತಿಗೆ “ರೋಬೋಟ್-ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಿದ್ದು, ಬಳಿಕ ಬರೋಬ್ಬರಿ 48 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ.
ಫೋರ್ಟಿಸ್ ಆಸ್ಪತ್ರೆಯ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ, ಬಾರಿಯಾಟ್ರಿಕ್ ಮತ್ತು ರೊಬೊಟಿಕ್ ಸರ್ಜರಿ ಹೆಚ್ಚುವರಿ ನಿರ್ದೇಶಕ ಡಾ. ಮನೀಶ್ ಜೋಶಿ ಅವರ ತಂಡವು ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ.
ಈ ವೇಳೆ ಮಾತನಾಡಿದ ಡಾ. ಮನೀಶ್ ಜೋಶಿ, ಬೆಂಗಳೂರು ಮೂಲದ 35 ವರ್ಷದ ಸೂರಜ್ ಎಂಬ ವ್ಯಕ್ತಿ ಕಳೆದ ಐದು ವರ್ಷಗಳಿಂದ ಅತಿಯಾದ ಸ್ಥೂಲಕಾಯತೆ ಹೊಂದಿದ್ದು, ಇದರಿಂದ ಆತನಿಗೆ ಸ್ಲೀಪ್ ಅಪ್ನಿಯಾ(ನಿದ್ರೆಯಲ್ಲಿ ಉಸಿರುಗಟ್ಟುವಿಕೆ) ಸಮಸ್ಯೆಗೆ ಒಳಗಾಗಿದ್ದರು. ಕೋವಿಡ್ ಸಾಂಕ್ರಮಿಕದ ಬಳಿಕ ಇವರ ಅತಿಯಾದ ತೂಕದಿಂದ ನಡೆಯಲೂ ಸಾಧ್ಯವಾಗದೇ ಬಿಪ್ಯಾಪ್(BIPAP) ಯಂತ್ರದ ಮೇಲೆ ಅವಲಂಬಿತರಾಗಿದ್ದರು. ಈ ಯಂತ್ರವು ನಿದ್ರೆ ಸಂದರ್ಭದಲ್ಲಿ ಸರಾಗವಾಗಿ ಉಸಿರಾಡಲು ಅನುವು ಮಾಡಿಕೊಡುತ್ತದೆ.ಇದಷ್ಟೇ ಅಲ್ಲದೆ, ಇವರ ಅತಿಯಾದ ತೂಕವು ಇವರ ದೈನಂದಿನ ಕೆಲಸಕಾರ್ಯಗಳಿಗೂ ಅಡ್ಡಿಯಾಗಿ, ನಿರಂತರ ಆಯಾಸ, ಉಸಿರಾಟ ಮತ್ತು ನಡೆಯಲು ತೊಂದರೆ, ಅನಿಯಮಿತ ನಿದ್ರೆಯ ಸಮಸ್ಯೆಗೆ ಒಳಗಾಗಿದ್ದರು.
ಅಷ್ಟೆಅಲ್ಲದೆ, ಆಗಾಗ್ಗೇ ಆಸ್ಪತ್ರೆಗೆ ದಾಖಲಾಗುವ ಸ್ಥಿತಿಯೂ ನಿರ್ಮಾಣವಾಗಿತ್ತು. ಈವೇಳೆ ಇವರಿಗೆ ಬೊಜ್ಜು ಹೈಪೋವೆಂಟಿಲೇಷನ್ ಸಿಂಡ್ರೋಮ್ ಸಮಸ್ಯೆ ಇರುವುದು ತಿಳಿದು ಬಂತು. ಇವರು ತೂಕ ಇಳಿಸದೇ ಹೋದಲ್ಲಿ ಇವರ ಜೀವಕ್ಕೇ ಆಪತ್ತು ಎದುರಾಗುವ ಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಅವರಿಗೆ ರೋಬೋಟ್-ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಇದರಿಂದ ಅವರ ಹೊಟ್ಟೆಯಲ್ಲಿನ ಬೊಜ್ಜನ್ನು ಹೊರತೆಗೆ, ಅವರ ಹೊಟ್ಟೆಯ ಗಾತ್ರವನ್ನು ಕಡಿಮೆ ಮಾಡಲಾಗುತ್ತದೆ.
ರೋಬೋಟ್-ನೆರವಿನ ತಂತ್ರಜ್ಞಾನ ಬಳಕೆಯಿಂದ ಈ ಶಸ್ತ್ರಚಿಕಿತ್ಸೆ ನಡೆಸಿದ್ದು, ಹೆಚ್ಚು ನಿಖರತೆ ನೀಡಿ, ವೇಗವಾಗಿ ಚೇತರಿಸಿಕೊಳ್ಳಲು ನೆರವಾಗುತ್ತದೆ. ಶಸ್ತ್ರಚಿಕಿತ್ಸೆಯ ಬಳಿಕ ಅವರು 48 ಕೆ.ಜಿ ತೂಕವನ್ನು ಕಳೆದುಕೊಂಡಿದ್ದು, ಸೂರಜ್ ಅವರು ಚೇತರಿಕೆಯ ಹಾದಿಯಲ್ಲಿದ್ದಾರೆ ಎಂದು ವಿವರಿಸಿದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…