17 ವರ್ಷದ ಬಾಲಕನನ್ನ ಪುಂಡರ ಗುಂಪೊಂದು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರ ನಗರದ ಪೇಟೆಚಾಮನಹಳ್ಳಿ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಐವರ ಗ್ಯಾಂಗ್ ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು. ಡಾನ್ ಆಗಬೇಕೆಂಬ ಹುಚ್ಚಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ಒದಗಿಬಂದಿದೆ.
ಕೋಲಾರದ ಬೈಪಾಸ್ ರಸ್ತೆಯಲ್ಲಿರುವ ಎಸ್‌ಡಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಕಾರ್ತಿಕ್‌ನನ್ನು ಆರೋಪಿಗಳು ಶುಕ್ರವಾರ ರಾತ್ರಿ 8 ಗಂಟೆ ಹೊತ್ತಿಗೆ ಪೇಟೆಚಾಮನಹಳ್ಳಿ ಬಡಾವಣೆಯ ಶಾಲೆ ಆವರಣಕ್ಕೆ ಕರೆಸಿಕೊಂಡು ಮನಸೋಇಚ್ಛೆ ತಳಸಿ, ಚಿತ್ರಹಿಂಸೆ ಮಾಡಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಬಟ್ಟೆ ಬಿಚ್ಚಿಸಿ ಮೈ ಕೈಗೆ ಗಾಜು, ಚಾಕು, ಬ್ಲೇಡ್‌ನಿಂದ ಕುಯ್ದಿದ್ದಾರೆ. ಚಿತ್ರಹಿಂಸೆ ನೀಡುತ್ತಿರುವುದನ್ನ ವಿಡಿಯೊ ಕೂಡ ಮಾಡಿದ್ದಾರೆ.
‘ನನ್ನ ಪುತ್ರ ಶುಕ್ರವಾರ ಹೊಟ್ಟೆ ನೋವು ಎಂದು ಕಾಲೇಜಿಗೆ ಹೋಗಿರಲಿಲ್ಲ. ಮಧ್ಯಾಹ್ನದವರೆಗೆ ಮನೆಯಲ್ಲೇ ಮಲಗಿಕೊಂಡಿದ್ದ. ಸಂಜೆ ಎಲ್ಲೋ ಹೋಗಿದ್ದ. ಕರೆ ಮಾಡಿದಾಗ ಫೋನ್ ಸ್ವಿಚ್ಡ್ ಆಫ್ ಆಗಿತ್ತು. ಆತನ ಕೊಲೆಯಾಗಿರುವ ಬಗ್ಗೆ ರಾತ್ರಿ 8.30ರ ಸುಮಾರಿಗೆ ಸಂಬಂಧಿಯೊಬ್ಬರು ಹೇಳಿದರು. ಪುತ್ರನ ಜೊತೆ ಇರುತ್ತಿದ್ದ ವ್ಯಕ್ತಿಯೇ ಕೊಲೆ ಮಾಡಿರುವ ಶಂಕೆ ಇದ್ದು, ಆತನಿಗೆ ಶಿಕ್ಷೆ ಕೊಡಿ’ ಎಂದು ಕಾರ್ತಿಕ್ ತಾಯಿ ಸುಶೀಲಾ ಗೋಳು ತೋಡಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…