ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವವರಿಗೆ ಅಂಚೆ ಮತದಾನ ಕಾರ್ಯವು 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಿಂದ 04 ರವರೆಗೆ ನಡೆಯಲಿದ್ದು, ಅಂಚೆ ಮತದಾನ ಕೇಂದ್ರದ ಮೇಲ್ವಿಚಾರಣೆಗಾಗಿ, ಗೆಜೆಟೆಡ್ ಅಧಿಕಾರಿ ಹಾಗೂ ದೇವನಹಳ್ಳಿ ತಾಲ್ಲೂಕು ಕಚೇರಿಯ ಗ್ರೇಡ್-2 ತಹಶೀಲ್ದಾರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ, 179-ದೇವನಹಳ್ಳಿ(ಪ.ಜಾ) ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪ್ರತಿಭಾ ಅವರು ಆದೇಶಿಸಿದ್ದಾರೆ.
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ದೇವನಹಳ್ಳಿಯ ತಾಲ್ಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಗ್ರೇಡ್-2 ರವರ ಕೊಠಡಿಯಲ್ಲಿ, 2023ರ ಮೇ 02, 03 ಹಾಗೂ 04 ರಂದು ಬೆಳಿಗ್ಗೆ 9.00 ಗಂಟೆಯಿಂದ 5.00 ಗಂಟೆಯವರೆಗೆ ಅಂಚೆ ಮತದಾನ ನಡೆಯಲಿದೆ.
ಅಂಚೆ ಮತದಾನ ಸೌಲಭ್ಯ ಕೇಂದ್ರದ ಮೇಲ್ವಿಚಾರಣೆಗಾಗಿ 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಶಾಲಾ ಶಿಕ್ಷಣ ಇಲಾಖೆಯ ದೇವನಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಕ್ಷೇತ್ರ ಸಮನ್ವಯಾಧಿಕಾರಿ ಮಂಜುಳ ಹಾಗೂ ದೇವನಹಳ್ಳಿ ತಾಲ್ಲೂಕು ಕಚೇರಿಯ ಗ್ರೇಡ್-2 ತಹಶೀಲ್ದಾರ್ ಉಷಾ ಅವರನ್ನು ಅಂಚೆ ಮತದಾನ ಕಾರ್ಯ ನಿರ್ವಹಿಸಲು, ಗೆಜೆಟೆಡ್ ಅಧಿಕಾರಿ ಹಾಗೂ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
ವಿವಿಧ ಇಲಾಖೆಗಳಲ್ಲಿ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನಾಂಕದಂದು ಕಾರ್ಯನಿರ್ವಹಿಸುತ್ತಿರುವ ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ನಿಗದಿತ ಸಮಯ, ಸ್ಥಳದಲ್ಲಿ ಹಾಜರಾಗಿ ಅಂಚೆ ಮತದಾನ ಕಾರ್ಯನಿರ್ವಹಿಸುವಂತೆ ಸೂಚಿಸಿ 179-ದೇವನಹಳ್ಳಿ(ಪ.ಜಾ) ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪ್ರತಿಭಾ ಅವರು ಆದೇಶಿಸಿದ್ದಾರೆ.