18ನೇ ಲೋಕಸಭೆಯ ಸ್ಪೀಕರ್ ಆಗಿ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರು ಆಯ್ಕೆಯಾಗಿದ್ದಾರೆ. ಕೇರಳದ ಐಎನ್‌ಡಿಐಎ ಮೈತ್ರಿಕೂಟದ ಕಾಂಗ್ರೆಸ್‌ನ ಹಿರಿಯ ಸಂಸದ ಮಾವೇಲಿಕರ ಕೋಡಿಕುನ್ನಿಲ್ ಸುರೇಶ್ ಅವರನ್ನು ಸೋಲಿಸಿ ಸ್ಪೀಕರ್ ಆಗಿ 2ನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ ವಿರೋಧ ಪಕ್ಷಗಳ ಹಕ್ಕನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ 48 ವರ್ಷಗಳ ನಂತರ ಲೋಕಸಭಾಧ್ಯಕ್ಷ ಸ್ಥಾನಕ್ಕೆ ಇಂದು ಸ್ಪರ್ಧೆ ನಡೆಯಿತು. ಹಂಗಾಮಿ ಸ್ಪೀಕರ್ ಅವರು ಧ್ವನಿ ಮತದ ಮೂಲಕ ಸಂಸದರ ಮತಗಳನ್ನು ಅಂಗೀಕರಿಸಿದರು.
ಕೋಚಿಂಗ್ ಫ್ಟಾಕ್ಟರಿಗೆ ಹೆಸರುವಾಸಿಯಾಗಿರುವ ರಾಜಸ್ಥಾನದ ಕೋಟಾ ಕ್ಷೇತ್ರದಿಂದ ಸಂಸದರಾಗಿರುವ 61 ವರ್ಷದ ಓಂ ಬಿರ್ಲಾ ಅವರು ಮೂರನೇ ತಲೆಮಾರಿನ ಆರ್‌ಎಸ್‌ಎಸ್ ಕುಟುಂಬದಿಂದ ಬಂದವರು. ಅದಕ್ಕೂ ಮುನ್ನ ಅವರು ರಾಜಸ್ಥಾನ ವಿಧಾನಸಭೆಯಲ್ಲಿ ಶಾಸಕರಾಗಿದ್ದರು.
ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…
ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…
ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…