18ನೇ ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅಭಿನಂದನೆ

18ನೇ ಲೋಕಸಭೆಯ ಸ್ಪೀಕರ್ ಆಗಿ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರು ಆಯ್ಕೆಯಾಗಿದ್ದಾರೆ. ಕೇರಳದ ಐಎನ್‌ಡಿಐಎ ಮೈತ್ರಿಕೂಟದ ಕಾಂಗ್ರೆಸ್‌ನ ಹಿರಿಯ ಸಂಸದ ಮಾವೇಲಿಕರ ಕೋಡಿಕುನ್ನಿಲ್ ಸುರೇಶ್ ಅವರನ್ನು ಸೋಲಿಸಿ ಸ್ಪೀಕರ್ ಆಗಿ 2ನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ ವಿರೋಧ ಪಕ್ಷಗಳ ಹಕ್ಕನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ 48 ವರ್ಷಗಳ ನಂತರ ಲೋಕಸಭಾಧ್ಯಕ್ಷ ಸ್ಥಾನಕ್ಕೆ ಇಂದು ಸ್ಪರ್ಧೆ ನಡೆಯಿತು. ಹಂಗಾಮಿ ಸ್ಪೀಕರ್ ಅವರು ಧ್ವನಿ ಮತದ ಮೂಲಕ ಸಂಸದರ ಮತಗಳನ್ನು ಅಂಗೀಕರಿಸಿದರು.

ಓಂ ಬಿರ್ಲಾ ಅವರು ಎನ್ ಡಿಎ ಮೈತ್ರಿ ಸರ್ಕಾರದಲ್ಲಿ ಎರಡನೇ ಬಾರಿಗೆ ಲೋಕಸಭಾಧ್ಯಕ್ಷರಾಗುತ್ತಿದ್ದು, ಅವರನ್ನು ಸ್ಪೀಕರ್ ಕುರ್ಚಿ ಬಳಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕರೆದುಕೊಂಡು ಬಂದು ಗೌರವಿಸಿ ಅಭಿನಂದಿಸಿದರು.

ಕೋಚಿಂಗ್ ಫ್ಟಾಕ್ಟರಿಗೆ ಹೆಸರುವಾಸಿಯಾಗಿರುವ ರಾಜಸ್ಥಾನದ ಕೋಟಾ ಕ್ಷೇತ್ರದಿಂದ ಸಂಸದರಾಗಿರುವ 61 ವರ್ಷದ ಓಂ ಬಿರ್ಲಾ ಅವರು ಮೂರನೇ ತಲೆಮಾರಿನ ಆರ್‌ಎಸ್‌ಎಸ್ ಕುಟುಂಬದಿಂದ ಬಂದವರು. ಅದಕ್ಕೂ ಮುನ್ನ ಅವರು ರಾಜಸ್ಥಾನ ವಿಧಾನಸಭೆಯಲ್ಲಿ ಶಾಸಕರಾಗಿದ್ದರು.

Ramesh Babu

Journalist

Recent Posts

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

2 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

11 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

22 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 day ago