ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಾದ ದಿನದಿಂದ (ದಿನಾಂಕ: 29-03-2023 ರಿಂದ 10-04-2023) ಏಪ್ರಿಲ್ 10 ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಸಲಾದ ವಿವಿಧ ಕಾರ್ಯಾಚರಣೆಗಳಿಂದ ಮದ್ಯ, ಬೆಲೆಬಾಳುವ ವಸ್ತುಗಳು, ಇತರೆ ವಸ್ತುಗಳು ಸೇರಿದಂತೆ ಒಟ್ಟು 1,86,87,431 ರೂಪಾಯಿ ಮೌಲ್ಯದ ದಾಖಲೆಯಿಲ್ಲದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ತಿಳಿಸಿದ್ದಾರೆ.
178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 49,96,090 ರೂಪಾಯಿ ಮೌಲ್ಯದ ವಸ್ತು
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 30,54,436 ರೂಪಾಯಿ ಮೌಲ್ಯದ ವಸ್ತು
180-ದೊಡ್ಡಬಳ್ಳಾಪುರ ವಿಧಾನಸಭಾ ವ್ಯಾಪ್ತಿಯಲ್ಲಿ ಒಟ್ಟು 21,77,628 ರೂಪಾಯಿ ಮೌಲ್ಯದ ವಸ್ತು
181-ನೆಲಮಂಗಲ ವ್ಯಾಪ್ತಿಯಲ್ಲಿ ಒಟ್ಟು 84,59,277 ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಅವರು ಮಾಹಿತಿ ನೀಡಿದ್ದಾರೆ.