ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ: ಶಿಕ್ಷಕರನ್ನು ತ್ವರಿತವಾಗಿ ನೇಮಿಸಬೇಕು- ನಗರಸಭೆ ಸದಸ್ಯ ವಡ್ಡರಹಳ್ಳಿ ರವಿ ಆಗ್ರಹ

ನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಾಲೆ ಆರಂಭವಾಗಿ ಒಂದೂವರೆ ತಿಂಗಳು ಕಳೆದರು, ಸೂಕ್ತ ಪಠ್ಯಚಟುವಟಿಕೆ ಆರಂಭವಾಗದೆ ವಿದ್ಯಾರ್ಥಿಗಳ ಕಲಿಕಾ ಚಟುವಟಿಕೆ ಕುಂಠಿತವಾಗುತ್ತಿದೆ.

ನಗರದ ಭಗತ್ ಸಿಂಗ್ ಕ್ರೀಡಾಂಗಣದ ಬಳಿಯಿರುವ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಇಲ್ಲಿ ಈ ವರ್ಷ 635 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಶಾಲೆಗೆ ಮಂಜೂರಾದ ಬೋಧಕ ಮತ್ತು ಬೋಧಕೇತರ ಒಟ್ಟು ಹುದ್ದೆಗಳು 40. ಆದರೆ, ಕರ್ತವ್ಯ ನಿರ್ವಹಿಸುತ್ತಿರುವವರು 22. ಖಾಲಿ ಹುದ್ದೆಗಳು 18. ಅಂದರೆ ಸುಮಾರು ಅರ್ಧಕ್ಕರ್ಧ ಹುದ್ದೆಗಳು ಖಾಲಿ ಹುದ್ದೆಗಳಿವೆ. ಅಲ್ಲದೆ ಈ ಶಾಲೆಯಲ್ಲಿ 7 ಗ್ರೂಪ್ ಡಿ ಹುದ್ದೆಗಳು ಖಾಲಿ ಇವೆ.

ಇಷ್ಟು ಖಾಲಿ ಹುದ್ದೆಗಳಿದ್ದಾಗ್ಯೂ ಆಷಾಡದಲ್ಲಿ ಅಧಿಕಮಾಸ ಎಂಬಂತೆ ಈ ಶಾಲೆಯ ಇಂಗ್ಲೀಷ್ ಭಾಷಾ ಶಿಕ್ಷಕರಾಗಿರುವ ರಾಜೇಶ್ ರಾಮಪ್ಪ ಯಡಹಳ್ಳಿ ಎಂಬ ಶಿಕ್ಷಕರು ಸುಮಾರು ನಾಲ್ಕು ವರ್ಷಗಳಿಂದ ಜಿಲ್ಲಾ ಪಂಚಾಯಿತಿ ಕಾರ್ಯಾಲಯಕ್ಕೆ ನಿಯಮಭಾಹಿರವಾಗಿ ನಿಯೋಜನೆಗೊಂಡಿರುತ್ತಾರೆ ಎಂಬುದು ನಗರಸಭೆ ಸದಸ್ಯ ವಡ್ಡರಹಳ್ಳಿ ರವಿಕುಮಾರ್ ಅವರ ಆರೋಪವಾಗಿದೆ.

ಈ ಕುರಿತು ಮಾತನಾಡಿರುವ ವಡ್ಡರಹಳ್ಳಿ ರವಿಕುಮಾರ್ ಅವರು, ಇತಿಹಾಸ ಹೊಂದಿರುವ ಸರ್ಕಾರಿ ಪ್ರೌಢಶಾಲೆಯನ್ನು ವ್ಯವಸ್ಥಿತವಾಗಿ ಮುಚ್ಚುವ ಹುನ್ನಾರದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗಿಯಾಗಿರುವ ಅನುಮಾನ ಕಾಡುತ್ತಿದೆ.

ಶಾಲೆಗೆ ಭೇಟಿ ನೀಡಿದರೇ.‌. ಇಲ್ಲಿನ ವಿದ್ಯಾರ್ಥಿಗಳು ಶಾಲೆ ಅರಂಭವಾಗಿ ಒಂದುವರೆ ತಿಂಗಳು ಕಳೆದರು ಇಂಗ್ಲೀಷ್ ಶಿಕ್ಷಕರಿಲ್ಲವೆಂದು ಕಣ್ಣೀರು ಹಾಕುತ್ತಾರೆ.

ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದ ಶಾಲೆ ಈಗ 600ಕ್ಕೆ ಕುಸಿದಿದೆ ಎಂದರೆ.. ಇದರ ಕಾರಣವೇನು..? ನಗರ ವ್ಯಾಪ್ತಿಯಲ್ಲಿಯೇ ಸರ್ಕಾರಿ ಶಾಲೆಯ ಸ್ಥಿತಿ ಆದರೆ. ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕೇಳುವವರು ಯಾರು..? ಎಂದು ಪ್ರಶ್ನಿಸಿರುವ ರವಿಕುಮಾರ್, ಈ ಕುರಿತು ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜಿಲ್ಲಾಪಂಚಾಯಿತಿ ಸಿಇಒ, ಜಂಟಿ ನಿರ್ದೇಶಕರಾದ ವಿಜಯ ಈ ರವಿಕುಮಾರ್ ಅವರಿಗೂ ಕ್ರಮವಹಿಸುವಂತೆ ಮನವಿ ಮಾಡಿದ್ದೇವೆ.

ಈ ನಿಟ್ಟಿನಲ್ಲಿ ಅಧಿಕಾರಿಗಳು ಶಿಕ್ಷಕರನ್ನು ತ್ವರಿತವಾಗಿ ನೇಮಿಸುವುದು, ಮಕ್ಕಳ ಶೈಕ್ಷಣಿಕ ಹಿತಾಸಕ್ತಿಯನ್ನು ಗಮನದಲ್ಲಿರಿಸದೇ ಇಂಗ್ಲೀಷ್ ಶಿಕ್ಷಕರನ್ನು ನಿಯಮಬಾಹಿರವಾಗಿ ನಿಯೋಜಿಸಿರುವುದನ್ನು ರದ್ದುಗೊಳಿಸಿ, ಮತ್ತೆ ಇದೇ ಶಾಲೆಗೆ ಕರೆಸಲು ಕ್ರಮಕೈಗೊಳ್ಳದೆ ಇದ್ದರೆ ಸಮಾನ ಮನಸ್ಕರು, ಪೋಷಕರೊಂದಿಗೆ ತೀವ್ರವಾದ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Ramesh Babu

Journalist

Recent Posts

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

36 minutes ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

2 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

3 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

5 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

8 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

20 hours ago