Categories: ಕೊಡಗು

ಪತಿಯ ಗುಂಡೇಟಿಗೆ ಬಲಿಯಾದ ಪತ್ನಿ:‌ ಪೊಲೀಸ್ ಠಾಣೆಗೆ ಕೋವಿಯೊಂದಿಗೆ ಶರಣಾದ ಪತಿರಾಯ

ತಾಳಿ ಕಟ್ಟಿದ ಹೆಂಡತಿಗೆ ಗುಂಡು ಹೊಡೆದು ಕೊಲೆ ಮಾಡಿರುವ ಪತಿರಾಯ. ಈ ಘಟನೆ ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ನಡೆದಿದೆ.

ಶಿಲ್ಪ ಸೀತಮ್ಮ(40)ಮೃತಪಟ್ಟ ದುರ್ದೈವಿ. ಆಕೆಯ ಪತಿ ನಾಯಕಂಡ ಬೋಪಣ್ಣ (45) ಹತ್ಯೆ ಮಾಡಿದ ಅರೋಪಿಯಾಗಿದ್ದಾನೆ.

ನಿನ್ನೆ ರಾತ್ರಿ ಶಿಲ್ಪ ಬೇರೊಬ್ಬರ ದೂರವಾಣಿ ಕರೆ ಸ್ವೀಕರಿಸಿ ಮಾತನಾಡಿದ್ದನ್ನು ಆಕ್ಷೇಪಿಸಿದ ನಂತರ ಈ ವಿಚಾರವಾಗಿ ಜಗಳ ನಡೆದು ಇಂದು ಬೆಳಗ್ಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಶಿಲ್ಪ ಸೀತಮ್ಮ 2012 ರಿಂದ 2017 ರವರೆಗೆ ಬೇಟೋಳಿ ಗ್ರಾಮ ಪಂಚಾಯತಿ ಸದಸ್ಯರಾಗಿ ಸೇವೆಸಲ್ಲಿಸಿದ್ದರು. ಕೊಲೆ ನಡೆಸಿದ ನಂತರ ಬೋಪಣ್ಣ ಪೊಲೀಸ್ ಠಾಣೆಗೆ ಕೋವಿಯೊಂದಿಗೆ ಶರಣಾಗಿದ್ದಾನೆ.

ಘಟನಾ ಸ್ಥಳಕ್ಕೆ ವಿರಾಜಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

3 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

9 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

22 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

23 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

1 day ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

1 day ago