1997-2000ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಸಮಾಗಮ ಹಾಗೂ ಗುರುವಂದನೆ ಕಾರ್ಯಕ್ರಮ

ಕಳೆದ ಬಾಲ್ಯ, ಕಲಿತ ಶಾಲೆ, ವಿದ್ಯೆ ನೀಡಿದ ಗುರುಗಳು, ಆಟ-ಪಾಠಗಳಲ್ಲಿ ಒಂದಾಗಿದ್ದ ಸಹಪಾಠಿಗಳ ಸುಮಧುರ ನೆನಪುಗಳ ಸಮಾಗಮ ಎಂತಹವರಿಗೂ ಖುಷಿ ನೀಡುತ್ತದೆ.

ಅಂತಹ ಒಂದು ಸುಮಧುರ ಘಳಿಗೆಗೆ ತಾಲೂಕಿನ ಮಾರುತಿ ಪ್ರೌಢ ಶಾಲೆ ಸಾಕ್ಷಿಯಾಯಿತು. 1997-2000 ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಸಮಾಗಮ ಹಾಗೂ ಗುರುವಂದನೆ ಕಾರ್ಯಕ್ರಮ ಜರುಗಿತು. ಹಳೆಯ ವಿದ್ಯಾರ್ಥಿಗಳೆಲ್ಲ ಒಂದೆಡೆ ಸೇರಿ ವಿದ್ಯಾರ್ಥಿ ಜೀವನದ ಸವಿ ನೆನಪುಗಳನ್ನು ಮೆಲಕು ಹಾಕುತ್ತಾ, ಕಲಿಸಿದ ಗುರುಗಳಿಗೆ ವಂದನೆ ಸಲ್ಲಿಸಿದ್ದು ಅವಿಸ್ಮರಣೀಯ ಕ್ಷಣಗಳಲ್ಲೊಂದಾಗಿತ್ತು, ಕಲಿಸಿದ ಗುರುಗಳಲ್ಲಿ ಸಾರ್ಥಕತೆಯ ಭಾವ ಮನೆ ಮಾಡಿದರೆ ವಿದ್ಯಾರ್ಥಿಗಳ ಕಣ್ಣಲ್ಲಿ ಕೃತಜ್ಞತಾ ಭಾವ ಕಂಗೊಳಿಸಿತು.

ಹಳೆ ವಿದ್ಯಾರ್ಥಿ ರಮೇಶ್ ಆರ್ ಸಿ ಮಾತನಾಡಿ, ವಿದ್ಯಾರ್ಥಿ ಜೀವನವೆಂಬುದು ಬೆಲೆ ಕಟ್ಟಲಾಗದ್ದು, ಪ್ರತಿ ವ್ಯಕ್ತಿಯ ಜೀವನದಲ್ಲಿ ಗುರುವಿನ ಪಾತ್ರ ಅಪಾರವಾಗಿರುತ್ತದೆ, ಅದಕ್ಕಾಗಿಯೇ ವಿದ್ಯಾರ್ಥಿ ಹಂತದ ಜೀವನ ಬಂಗಾರದ ಜೀವನ ಎಂದು ಕರೆಯಲ್ಪಡಲಾಗುತ್ತದೆ ಎಂದರು.

ಶಾಲಾ ಕಾರ್ಯದರ್ಶಿ ಮುರಳಿ ಮೋಹನ್ ಮಾತನಾಡಿ, ಶಿಕ್ಷಣ ಪಡೆದ ಶಾಲೆ ಹಾಗೂ ಶಿಕ್ಷಣ ನೀಡಿದ ಗುರುವಿಗೆ ಬೆಲೆಕೊಟ್ಟ ನಿಮ್ಮ ಔದಾರ್ಯ ಇತರರಿಗೆ ಪ್ರೇರಣಾದಾಯಕ ಎಂದು ಹೇಳಿದರು.

ಕಾಂತರಾಜು, ನಾಗೇಶ್, ಹೇಮರಾಜ್, ಕೋಮಲ, ಪ್ರತಿಭಾ, ರಾಜೇಶ್ವರಿ, ವೆಂಕಟೇಶ್, ನಿವೃತ್ತ ಶಿಕ್ಷಕರಾದ ವೆಂಕಟ ರಾಮನ ಗುಪ್ತ, ಅಧಿ ಶೇಷಪ್ಪ, ಎನ್ ಮುನಿರಾಜು, ಸಿ ಕೃಷ್ಣಪ್ಪ, ಮುಖ್ಯ ಶಿಕ್ಷಕ ವೈ ವಿ ಕೃಷ್ಣ ಮೂರ್ತಿ, ಕೆ ವೆಂಕಟ ರಾಮನ ಇನ್ನು ಮುಂತಾದವರು ಭಾಗವಹಿಸಿದ್ದರು,

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

11 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

12 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

18 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

19 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

2 days ago