2.17 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ : ಘಾಟಿ ಜಾತ್ರೆಯ ಉತ್ತಮ ರಾಸುಗಳಿಗೆ ಬಹುಮಾನ ವಿತರಣೆ

ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ, ಮೇಳೇಕೋಟೆ ಗ್ರಾಮ ಪಂಚಾಯಿತಿ, ಮೇಲಿನಜೂಗಾನಹಳ್ಳಿ(ಎಸ್.ಎಸ್ ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 2.17 ಕೋಟಿ ರೂಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಚಾಲನೆ ನೀಡಿದರು.

ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ 161.98 ಲಕ್ಷ ರೂಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಸಿ.ಸಿ ರಸ್ತೆ, ಚರಂಡಿ, ಅಂಗನವಾಡಿ ದುರಸ್ಥಿ, ನೂತನ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದರು.

ಮೆಳೇಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ 21 ಲಕ್ಷ ರೂ.ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಎನ್.ಆರ್.ಎಲ್.ಎಂ ಭವನದಲ್ಲಿ ವಿಶೇಷ ಚೇತನರ ಉಪಯೋಗಕ್ಕಾಗಿ ರ್ಯಾಂಪ್ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಮೇಲಿನಜೂಗಾನಹಳ್ಳಿ(ಎಸ್.ಎಸ್ ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 34.99 ಲಕ್ಷ ರೂಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಶುದ್ಧ ಕುಡಿಯುವ ನೀರು ಘಟಕ ಯಂತ್ರೋಪಕರಣ ಅಳವಡಿಕೆಗೆ ಚಾಲನೆ ನೀಡಿದರು.

*ಘಾಟಿ ಜಾತ್ರೆಯಲ್ಲಿ ಉತ್ತಮ ರಾಸುಗಳಿಗೆ ಬಹುಮಾನ ವಿತರಣೆ*

ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವತಿಯಿಂದ ಎಸ್.ಎಸ್ ಘಾಟಿ ಕ್ಷೇತ್ರದಲ್ಲಿ ಈ ವರ್ಷ ನಡೆದ ರಾಸುಗಳ ಜಾತ್ರೆಯಲ್ಲಿ ಭಾಗವಹಿಸಿದ್ದ ಉತ್ತಮ ರಾಸುಗಳ ವಿಜೇತ ಮಾಲೀಕರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಬಹುಮಾನ ವಿತರಿಸಿ ಸನ್ಮಾನಿಸಿ ಮಾತನಾಡಿ ಒಕ್ಕಲು ಮಕ್ಕಳಾದ ನಾವು ಪಶು ಸಂಪತ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಘಾಟಿ ಅಭಿವೃದ್ಧಿ ಪ್ರಾಧಿಕಾರ ಉತ್ತಮ ಕೆಲಸ ಮಾಡುತಿದ್ದು ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲು ಬದ್ದನಾಗಿದ್ದು, ತಮ್ಮ ತಾತ ತಂದೆಯ ಕಾಲದಲ್ಲಿ ಜಾತ್ರೆಗೆ ಭಾಗವಹಿಸುತಿದ್ದುದನ್ನು ಸ್ಮರಿಸಿದರು.

ಹಾಲು ಹಲ್ಲಿನ ಹೋರಿಗಳಲ್ಲಿ ಪ್ರಥಮ ಬಹುಮಾನವಾಗಿ ಹೊಸಕೋಟೆ ತಾಲ್ಲೂಕಿನ ತರಬರಹಳ್ಳಿಯ ನಾರಾಯಣಸ್ವಾಮಿ, ಬಾಯಿ ಗೂಡಿದ ಜೋಡಿ ಎತ್ತುಗಳಲ್ಲಿ ಪ್ರಥಮ ಬಹುಮಾನವಾಗಿ ದೇವನಹಳ್ಳಿ ತಾಲ್ಲೂಕು ಚೆನ್ನಹಳ್ಳಿ ಗ್ರಾಮದ ಮುನಿಯಪ್ಪ, ಹಾಲು ಹಲ್ಲಿನ ಜೊತೆ ಎತ್ತುಗಳಲ್ಲಿ ಪ್ರಥಮ ಬಹುಮಾನವಾಗಿ ಬೆಂ.ನಗರ ಜಿಲ್ಲೆಯ ಜಕ್ಕೂರಿನ ಜಶ್ವಂತ್, ಆರು ಹಲ್ಲಿನ ಜೊತೆ ಎತ್ತುಗಳಲ್ಲಿ ಪ್ರಥಮ ಬಹುಮಾನವಾಗಿ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ಆದರ್ಶ್, ನಾಲ್ಕು ಹಲ್ಲಿನ ಜೋಡಿ ಎತ್ತುಗಳಲ್ಲಿ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಮಾನೆ ನಾರಾಯಣಪ್ಪ, ಆರು ಹಲ್ಲಿನ ಹೋರಿಗಳಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಗೆದ್ದಲಪಾಳ್ಯದ ಚಿಕ್ಕ ಮುನಿಯಪ್ಪ, ಎರಡು ಹಲ್ಲಿನ ಜೊತೆ ಎತ್ತುಗಳಲ್ಲಿ ದೇವನಹಳ್ಳಿ ಶ್ರೀನಿವಾಸ್ ಇವರುಗಳಿಗೆ ಪ್ರಥಮ ಬಹುಮಾನ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಇಒ ಮುನಿರಾಜು, ಧಾರ್ಮಿಕ ದತ್ತಿ ಸಹಾಯಕ ನಿರ್ದೇಶಕರಾದ ಇ ದಿನೇಶ್, ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಂಗಣ್ಣ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಜಗದೀಶ್, ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

17 minutes ago

ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ‌ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…

2 hours ago

ಮಾನಸಿಕ ಗುಣಮಟ್ಟ ಪರೀಕ್ಷಿಸಿಕೊಳ್ಳುವ ಆತ್ಮಾವಲೋಕನ ನಡೆಯಲಿ…

ಭಾವ ಬಯಲಿನ‌ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…

7 hours ago

DRI ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: ಕ್ಯಾಪ್ಸೂಲ್ ರೂಪದಲ್ಲಿ ಚಿನ್ನ ಸಾಗಾಟ: 5 ಕೋಟಿ ಮೌಲ್ಯದ ಚಿನ್ನದ ಬಿಸ್ಕೆಟ್ ವಶ

DRI (Directorate of Revenue Intelligence) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, 5 ಜನ ಆರೋಪಿಗಳ ಬಂಧನ ಮಾಡಿ ಬಂಧಿತರಿಂದ…

9 hours ago

ಭ್ರಷ್ಟ ಅಧಿಕಾರಿ ಮನೆಯಲ್ಲಿ ಲೋಕಾ ತಲಾಶ್: ಆದಾಯ ಮೀರಿದ ಶೇ 120ರಷ್ಟು ಆಸ್ತಿ ಪತ್ತೆ

ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬಗೆದೊಷ್ಟು ಬಯಲಾಗುತ್ತಿದೆ ಭ್ರಷ್ಟ…

9 hours ago

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಬೃಹತ್ ಪಾದಯಾತ್ರೆ

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…

20 hours ago