ಸಣ್ಣನೀರಾವರಿ ಇಲಾಖೆಯ ವತಿಯಿಂದ ಅಟಲ್ ಭೂಜಲ ಯೋಜನೆಯಡಿ ದೇವನಹಳ್ಳಿ ತಾಲ್ಲೂಕಿನ ಸಾವಕನಹಳ್ಳಿ, ಹುರುಳುಗುರ್ಕಿ, ದಂಡದಾಸ ಕೊಡಗೇಹಳ್ಳಿ, ತೈಲಗೆರೆ ಗ್ರಾಮಗಳಲ್ಲಿ ಅಂದಾಜು 2.70 ಕೋಟಿ ರೂ.ಗಳ ವೆಚ್ಚದಲ್ಲಿ ಚೆಕ್ ಡ್ಯಾಮ್ ನಿರ್ಮಾಣ ಕಾಮಗಾರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಸಾವಕನಹಳ್ಳಿಯಲ್ಲಿ ಚಾಲನೆ ನೀಡಿದರು.
ಚೆಕ್ ಡ್ಯಾಂ ಗಳನ್ನು ನಿರ್ಮಿಸಿ ನೀರನ್ನು ಶೇಖರಿಸುವುದರಿಂದ ಪ್ರಾಣಿ ,ಪಕ್ಷಿಗಳಿಗೆ ಹಾಗೂ ರೈತರ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗುತ್ತದೆ ಎಂದು ಈ ಸಂದರ್ಭದಲ್ಲಿ ಸಚಿವರು ಹೇಳಿದರು.
ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮಂಜುನಾಥ್, ಸಹಾಯಕ ಇಂಜಿನಿಯರ್ ವಿಕಾಸ್, ಅಧಿಕಾರಿಗಳು, ಬಿದಲೂರು ಪಂಚಾಯಿತಿ ಅಧ್ಯಕ್ಷ ಮುನಿರಾಜು, ಚುನಾಯಿತ ಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…