ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ ₹2,000 ಕೋಟಿ ನೀಡಿದ್ದೇವೆ. ₹200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸರ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲು ನಿರ್ಧರಿಸಿದ್ದೇವೆ ಎಂದರು.
ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಾ, ಅವರ ಕುಟುಂಬಗಳಿಗೆ ಸಂತಾಪ ಸೂಚಿಸಲು ಬಯಸುತ್ತೇನೆ. ದೇಶದ, ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ, ಜನರ ಪ್ರಾಣ, ಮಾನ ಕಾಪಾಡುವ ಪವಿತ್ರ ಕಾರ್ಯದಲ್ಲಿ ಇವರೆಲ್ಲಾ ಹುತಾತ್ಮರಾಗಿದ್ದಾರೆ ಎಂದು ಹೇಳಿದರು.
ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು ಎಂದು ತಿಳಿಸಿದರು.
ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನಬದ್ಧವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೊಲೀಸರು. ಇವರ ಜೊತೆಗೆ ಸರ್ಕಾರ ಇರುತ್ತದೆ ಎಂದರು.
ಅಪರಾಧ ತಡೆಯಲು 6000 ಸಾವಿರ ಸಿಸಿ ಕ್ಯಾಮರಾಗಳು, 260 ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಹೇಳಿದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…