200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ

ನಗರದ ಸೌಂದರ್ಯ ಮಹಲ್ ಮುಖ್ಯರಸ್ತೆಯಲ್ಲಿ ಶಿಥಿಲಗೊಂಡಿದ್ದ ಸುಮಾರು 200 ವರ್ಷಗಳ ಇತಿಹಾಸ ಇರುವ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಓಬದೇನಹಳ್ಳಿ ಕೆ.ಮುನಿಯಪ್ಪ ನೇತೃತ್ವದಲ್ಲಿ ವೀರ ಶೈವ ಸಂಘದ ಪದಾಧಿಕಾರಿಗಳು ಹಾಗೂ ಭೋವಿ ಸಮುದಾಯದ ಮುಖಂಡರು ಪೂಜೆ ಸಲ್ಲಿಸಿ ಸಿಹಿ ಹಂಚುವ ಮೂಲಕ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಿದರು.

ಸಂದರ್ಭದಲ್ಲಿ ಮುಖಂಡರಾದ ಒಬದೇನಹಳ್ಳಿ ಕೆ.ಮುನಿಯಪ್ಪ ಮಾತನಾಡಿ, ಐತಿಹಾಸಿಕ ಭದ್ರಾಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯ ಶಿಥಿಲಾವಸ್ಥೆ ತಲುಪಿದ್ದು, ದೇವಾಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಭೋವಿ ಸಮಾಜ ಹಾಗೂ ವೀರ ಶೈವ ಸಮುದಾಯದ ಮುಖಂಡರು ಒಮ್ಮತದಿಂದ ನಿರ್ಧರಿಸಿ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದು. ಐತಿಹಾಸಿಕ ದೇವಾಲಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿರುವುದು ಸಂತಸ ತಂದಿದೆ ಎಂದರು.

ವೀರ ಶೈವ ಸಮುದಾಯದ ಮುಖಂಡರಾದ ಸೋಮಣ್ಣ ಮಾತನಾಡಿ, ಪಾಳು ಬಿದಿದ್ದ ದೇವಾಲಯವನ್ನು ಅಭಿವೃದ್ಧಿಪಡಿಸುವ ಮೂಲಕ 200 ವರ್ಷಗಳಷ್ಟು ಹಳೆಯ ಭದ್ರಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯದ ಉಳಿವಿಗೆ ಎರಡು ಸಮುದಾಯದ ಮುಖಂಡರು ಮುಂದಾಗಿರುವುದು ಸಂತಸ ತಂದಿದೆ. ನಗರ ಭಾಗದಲ್ಲಿ ಕೇವಲ ಒಂದು ವೀರಭದ್ರಸ್ವಾಮಿ ದೇವಾಲಯವಿದ್ದು, ಈ ಜೀರ್ಣೋದ್ಧಾರ ಕಾರ್ಯವು ಆದಷ್ಟು ತೀವ್ರ ಗತಿಯಲ್ಲಿ ನಡೆಯಲಿದೆ ಎಂದರು.

ಈ ವೇಳೆ ವೀರ ಶೈವ ಸಂಘದ ಅಧ್ಯಕ್ಷರಾದ ಸೋಮ ರುದ್ರಶರ್ಮ, ಕಾರ್ಯದರ್ಶಿ ಮಂಜುನಾಥ್, ಖಜಾಂಜಿ ಗಿರೀಶ್, ಮುಖಂಡರಾದ ಪಣೀಶ್, ಪರಮೇಶ್, ಗಿರೀಶ್ , ಶಿವಾನಂದಪ್ಪ , ಮಂಜುನಾಥ್ , ಉಮಾಪತಿ , ಸಿದ್ದಣ್ಣ , ನಗರ ಸಭಾ ಸದಸ್ಯ ಪದ್ಮರಾಜು, ಸದಸ್ಯರಾದ ಭಾಸ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

8 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

9 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

12 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

12 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

14 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

19 hours ago