ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) 2,000 ರೂ. ಮುಖಬೆಲೆಯ ಪಿಂಕ್ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ತೀರ್ಮಾನಿಸಿದೆ.
ಸೆಪ್ಟೆಂಬರ್ 30ರವರೆಗೆ 2 ಸಾವಿರ ಮುಖಬೆಲೆಯ ನೋಟುಗಳನ್ನು ಕಾನೂನು ಬದ್ಧವಾಗಿ ಬ್ಯಾಂಕ್ ಗಳಲ್ಲಿ ಚಲಾವಣೆ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಗಡುವು.
ನವೆಂಬರ್ 8, 2016 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ 500 ಮತ್ತು 1,000 ರೂಪಾಯಿ ನೋಟ್ ಬ್ಯಾನ್ ಮಾಡುವುದಾಗಿ ಘೋಷಿಸಿದ್ದರು. ನೋಟು ಅಮಾನ್ಯೀಕರಣ ನೀತಿಯನ್ನು ಜಾರಿಗೆ ತರುವ ಮುಖ್ಯ ಕಾರಣ ಕಪ್ಪುಹಣಕ್ಕೆ(ಬ್ಲ್ಯಾಕ್‌ಮನಿ) ಕಡಿವಾಣ ಹಾಕುವುದು, ನಕಲಿ ನೋಟುಗಳನ್ನು ನಿರ್ಮೂಲನೆ ಮಾಡುವುದು ಮತ್ತು ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವ ಮೂಲಕ ನಗದು ರಹಿತ ಆರ್ಥಿಕತೆಯನ್ನು ಸೃಷ್ಟಿಸುವುದು ಯೋಜನೆಯ ಗುರಿಯಾಗಿತ್ತು.