ನಾನು ರಾಜಕೀಯಕ್ಕೆ ಬಂದು 50 ವರ್ಷಗಳಾಗಿದೆ. 2005 ರಲ್ಲಿ ಜೆಡಿಎಸ್ ನಿಂದ ನನ್ನನ್ನು ಉಚ್ಛಾಟನೆ ಮಾಡಿದ ನಂತರ ಅನಿವಾರ್ಯವಾಗಿ ಕಾಂಗ್ರೆಸ್ ಸೇರಬೇಕಾಗಿ ಬಂತು. ಅಹ್ಮದ್ ಪಟೇಲ್ ಸೇರಿದಂತೆ ಅಂದಿನ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ತಿಳಿಸಿದರು. ಜನರ ಆಶೀರ್ವಾದದಿಂದ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವ ಅವಕಾಶ ದೊರೆತಿದ್ದು, ಜಾತ್ಯಾತೀತ ರಾಜಕೀಯ ನೀತಿಯನ್ನು ಪಾಲಿಸುತ್ತಿದ್ದೇನೆ. ಸಂವಿಧಾನದಲ್ಲಿ ತಿಳಿಸಿದಂತೆ ಎಲ್ಲ ಜಾತಿ ಮತ್ತು ಧರ್ಮದವರನ್ನು ಗೌರವಿಸಿ, ಜಾತ್ಯಾತಿತವಾಗಿರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಾ, ಸಾಮಾಜಿಕ ನ್ಯಾಯದಿಂದ ವಂಚಿತರಾಗಿರುವ ವರ್ಗಗಳಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇನೆ ಎಂದ ಸಿಎಂ ಸಿದ್ದರಾಮಯ್ಯ.
ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಸಿದ್ದಸಿಂಹಾಸನದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವಿಭಾಗೀಯ ಮಠ ಮೈಸೂರು ಇವರ ವತಿಯಿಂದ ಗುರುಪೀಠದ ಬಳಿ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು, ಇಂದಿರಾ ಕ್ಯಾಂಟೀನ್, ಕ್ಷೀರಭಾಗ್ಯ ಯೋಜನೆಗಳು ಎಲ್ಲ ಜಾತಿ ಧರ್ಮದ ಜನರಿಗೂ ತಲುಪುತ್ತಿದ್ದು, ಅವಕಾಶ ವಂಚಿತರಿಗೆ ನ್ಯಾಯ ಒದಗಿಸುವ ಯೋಜನೆಗಳಾಗಿವೆ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಮುಖ್ಯವಾಹಿನಿಗೆ ಬರಬೇಕು. ಶಕ್ತಿ ಯೋಜನೆಯಡಿ 70 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಪ್ರವಾಸೋದ್ಯಮ, ಆರ್ಥಿಕ ಚಟುವಟಿಕೆಗೆ ಚುರುಕುಗೊಂಡು ರಾಜ್ಯದ ಜಿಡಿಪಿ ಹೆಚ್ಚಾಗುತ್ತಿದೆ. ರಾಜ್ಯದ ತಲಾ ಆದಾಯ ಹೆಚ್ಚಾಗಿದೆ. ಪ್ರತಿ ಅರ್ಹ ಫಲಾನುಭವಿ ಕುಟುಂಬಕ್ಕೆ ವಾರ್ಷಿಕವಾಗಿ 50 ರಿಂದ 60 ಸಾವಿರ ಸರ್ಕಾರ ಒದಗಿಸುತ್ತಿದ್ದು, ಕುಟುಂಬದ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿದೆ ಎಂದರು.
ಜನರ ಆಶೀರ್ವಾದದ ಫಲದಿಂದ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ. ಇತರೆ ರಾಜಕೀಯ ಪಕ್ಷಗಳು ರಾಜಕೀಯ ಪ್ರೇರಿತವಾಗಿ ಟೀಕೆ ಮಾಡುತ್ತವೆ. ವಿರೋಧಪಕ್ಷಗಳು ಮಾಡುವುದು ಕೇವಲ ಆರೋಪಗಳೇ ಹೊರತು, ಸತ್ಯವಲ್ಲ ಎಂದು ಹೇಳಿದರು.
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…