Categories: ರಾಜ್ಯ

2005ರಲ್ಲಿ ಜೆಡಿಎಸ್ ನಿಂದ ನನ್ನನ್ನು ಉಚ್ಛಾಟನೆ: ಅನಿವಾರ್ಯವಾಗಿ ಕಾಂಗ್ರೆಸ್ ಸೇರ್ಪಡೆ- ಸಿಎಂ ಸಿದ್ದರಾಮಯ್ಯ

ನಾನು ರಾಜಕೀಯಕ್ಕೆ ಬಂದು 50 ವರ್ಷಗಳಾಗಿದೆ. 2005 ರಲ್ಲಿ ಜೆಡಿಎಸ್ ನಿಂದ ನನ್ನನ್ನು ಉಚ್ಛಾಟನೆ ಮಾಡಿದ ನಂತರ ಅನಿವಾರ್ಯವಾಗಿ ಕಾಂಗ್ರೆಸ್ ಸೇರಬೇಕಾಗಿ ಬಂತು. ಅಹ್ಮದ್ ಪಟೇಲ್ ಸೇರಿದಂತೆ ಅಂದಿನ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ತಿಳಿಸಿದರು. ಜನರ ಆಶೀರ್ವಾದದಿಂದ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವ ಅವಕಾಶ ದೊರೆತಿದ್ದು, ಜಾತ್ಯಾತೀತ ರಾಜಕೀಯ ನೀತಿಯನ್ನು ಪಾಲಿಸುತ್ತಿದ್ದೇನೆ. ಸಂವಿಧಾನದಲ್ಲಿ ತಿಳಿಸಿದಂತೆ ಎಲ್ಲ ಜಾತಿ ಮತ್ತು ಧರ್ಮದವರನ್ನು ಗೌರವಿಸಿ, ಜಾತ್ಯಾತಿತವಾಗಿರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಾ, ಸಾಮಾಜಿಕ ನ್ಯಾಯದಿಂದ ವಂಚಿತರಾಗಿರುವ ವರ್ಗಗಳಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇನೆ ಎಂದ ಸಿಎಂ ಸಿದ್ದರಾಮಯ್ಯ.

ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಸಿದ್ದಸಿಂಹಾಸನದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವಿಭಾಗೀಯ ಮಠ ಮೈಸೂರು ಇವರ ವತಿಯಿಂದ ಗುರುಪೀಠದ ಬಳಿ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು, ಇಂದಿರಾ ಕ್ಯಾಂಟೀನ್, ಕ್ಷೀರಭಾಗ್ಯ ಯೋಜನೆಗಳು ಎಲ್ಲ ಜಾತಿ ಧರ್ಮದ ಜನರಿಗೂ ತಲುಪುತ್ತಿದ್ದು, ಅವಕಾಶ ವಂಚಿತರಿಗೆ ನ್ಯಾಯ ಒದಗಿಸುವ ಯೋಜನೆಗಳಾಗಿವೆ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಮುಖ್ಯವಾಹಿನಿಗೆ ಬರಬೇಕು. ಶಕ್ತಿ ಯೋಜನೆಯಡಿ 70 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ  ಪ್ರವಾಸೋದ್ಯಮ, ಆರ್ಥಿಕ ಚಟುವಟಿಕೆಗೆ ಚುರುಕುಗೊಂಡು ರಾಜ್ಯದ ಜಿಡಿಪಿ ಹೆಚ್ಚಾಗುತ್ತಿದೆ. ರಾಜ್ಯದ ತಲಾ ಆದಾಯ ಹೆಚ್ಚಾಗಿದೆ. ಪ್ರತಿ ಅರ್ಹ ಫಲಾನುಭವಿ ಕುಟುಂಬಕ್ಕೆ ವಾರ್ಷಿಕವಾಗಿ 50 ರಿಂದ 60 ಸಾವಿರ ಸರ್ಕಾರ ಒದಗಿಸುತ್ತಿದ್ದು, ಕುಟುಂಬದ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿದೆ ಎಂದರು.

ಜನರ ಆಶೀರ್ವಾದದ ಫಲದಿಂದ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ. ಇತರೆ ರಾಜಕೀಯ ಪಕ್ಷಗಳು ರಾಜಕೀಯ ಪ್ರೇರಿತವಾಗಿ ಟೀಕೆ ಮಾಡುತ್ತವೆ. ವಿರೋಧಪಕ್ಷಗಳು ಮಾಡುವುದು ಕೇವಲ ಆರೋಪಗಳೇ ಹೊರತು, ಸತ್ಯವಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

10 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

15 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

18 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago