Categories: ರಾಜ್ಯ

2018ರ ಸಮ್ಮಿಶ್ರ ಸರ್ಕಾರದಿಂದ ನಮಗೆ ಅನ್ಯಾಯ: ಸಿದ್ದರಾಮಯ್ಯ ಬಳಿ ಹೇಳಿದರೂ ಉಪಯೋಗವಾಗಲಿಲ್ಲ: ಬೇಸತ್ತು‌ ರಾಜೀನಾಮೆ- ಡಾ.ಕೆ.ಸುಧಾಕರ್

2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ಡಾ.ಕೆ.ಸುಧಾಕರ್ ಬರೆದುಕೊಂಡಿದ್ದಾರೆ.

2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.

ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು.

ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.

Ramesh Babu

Journalist

Recent Posts

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

1 hour ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

11 hours ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

13 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

15 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

23 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

1 day ago