Categories: ರಾಜ್ಯ

2019ರ ಲೋಕಸಭೆ ಚುನಾವಣೆ: ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ- ಮಾಜಿ ಸಿಎಂ‌ ಎಚ್.ಡಿ ಕುಮಾರಸ್ವಾಮಿ

ಮಂಡ್ಯ ಜಿಲ್ಲೆಯ ಗ್ಯಾರಂಟಿಗಳ 2ನೇ ಸಮಾವೇಶದಲ್ಲಿ ಅಲವತ್ತುಕೊಂಡ ಸಿಎಂ ಸಿದ್ದರಾಮಯ್ಯನವರೇ.. ಕೊನೆಗೂ ಸತ್ಯ ನುಡಿದಿದ್ದೀರಿ! ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು, ಕೊನೆಗೂ ಸತ್ಯ ಕಕ್ಕಿದ್ದೀರಿ! ಸುಳ್ಳುರಾಮಯ್ಯನೆಂಬ ಕುಖ್ಯಾತಿಯಿಂದ ಹೊರಬರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೀರಿ. ಅಭಿನಂದನೆಗಳು.

ಸತ್ಯ ಗಂಟಲಲ್ಲಿ ಸಿಕ್ಕಿಕೊಂಡ ಬಿಸಿತುಪ್ಪದಂತೆ.. ಕಕ್ಕಲೇಬೇಕು. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ. ನಿಮ್ಮದೇ ಮಾತುಗಳಲ್ಲಿ ಹೇಳುವುದಾದರೆ.. ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ.. ಕಾಂಗ್ರೆಸ್‌ ವೋಟುಗಳಿಂದಲೇ ಗೆದ್ದಿದ್ದು ಆಯಮ್ಮ..!!

ಇದಲ್ಲವೇ ನಂಬಿಕೆದ್ರೋಹ..?

ನಿಮ್ಮ ಗೋಮುಖವ್ಯಾಘ್ರತನ ಅರಿಯಲು ಇಷ್ಟು ಸಾಕು. ಅಂದು ಕಾಂಗ್ರೆಸ್ ಮೈತ್ರಿ ಪಕ್ಷ, ನಿಖಿಲ್‌ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ. ಅವರ ಜತೆಯಲ್ಲೇ ಪ್ರಚಾರದ ಸೋಗಿನಾಟವಾಡಿ, ಮಾಧ್ಯಮಗಳ ಮುಂದೆ ಗೆಲ್ಲಿಸುತ್ತೇವೆಂದು ಪೋಸು ಕೊಡುತ್ತಲೇ ನಿಖಿಲ್ ಸುತ್ತ ಶಕುನಿವ್ಯೂಹವನ್ನೇ ರಚಿಸಿದ ಕಲಿಯುಗ ಶಕುನಿ ನೀವಲ್ಲದೆ ಮತ್ತ್ಯಾರು ಸಿದ್ದರಾಮಯ್ಯನವರೇ?

ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗದೇ? ಬೂದಿ ಮುಚ್ಚಿದ ಕೆಂಡ ತಣ್ಣಗಿರಲು ಸಾಧ್ಯವೇ? ಕುದಿಯುವ ಕುಲುಮೆಯಂತಿರುವ ನಿಮ್ಮ ಉದರಹುರಿಗೆ ತಂಪೆನ್ನುವುದುಂಟೆ? 5 ವರ್ಷಗಳ ನಂತರವಾದರೂ ಸತ್ಯ ಕಕ್ಕಿದ್ದೀರಿ ಹಾಗೂ ನಂಬಿದವನ ಮನೆ ನಾಶವಾಗಲಿ ಎನ್ನುವ ನಿಮ್ಮಹೇಯತನ ಬಯಲಾಗಿದೆ.
ಸತ್ಯಮೇಯ ಜಯತೆ. ಇದಿಷ್ಟೇ ನನ್ನ ಕಳಕಳಿ ಮತ್ತು ನಂಬಿಕೆ.

ಸಕ್ಕರೆ ಕಾರ್ಖಾನೆ ಬಗ್ಗೆ ಹೇಳಿದ್ದೀರಿ. ಬಜೆಟ್‌ʼನಲ್ಲಿ ‌ಘೋಷಣೆ ಮಾಡಿದ್ದೀರಿ, ಸರಿ.. ದುಡ್ಡು ಎಲ್ಲಿಟ್ಟಿದ್ದೀರಿ. ನಾನು 2019ರ ಬಜೆಟ್‌ ನಲ್ಲಿಯೇ ಈ ಕಾರ್ಖಾನೆಗೆ 100 ಕೋಟಿ ತೆಗೆದಿರಿಸಿದ್ದೆ. ಎಲ್ಲಿ ಹೋಯಿತು ಆ ದುಡ್ಡು? ಇದರ ಬಗ್ಗೆ ಗ್ಯಾರಂಟಿ ಸಮಾವೇಶದಲ್ಲಿ ಚಕಾರ ಎತ್ತಿಲಿಲ್ಲವೇಕೆ ಸಿದ್ದರಾಮಯ್ಯನವರೇ? ಇಂಥ ಆತ್ಮವಂಚನೆ ಏತಕ್ಕೆ?

ತನ್ನ ತಲೆಗೇ ಹರಳೆಣ್ಣೆ ಇಲ್ಲ, ಪಕ್ಕದವನಿಗೆ ಸಂಪಂಗೆಣ್ಣೆ ಕೊಟ್ಟನಂತೆ ನಿಮ್ಮಂಥವನೊಬ್ಬ! ನಿಮ್ಮ ವೈಖರಿ ಹಾಗಿದೆ. ಕನ್ನಡಿಗರು ಬರದ ಬೆಂಕಿಯಲ್ಲಿ ಬೇಯುತ್ತಿದ್ದರೆ ನಿಮ್ಮ ಸರಕಾರ ಕದ್ದೂಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ! ಒಂದು ಕೈಲಿ ಅಗ್ಗದ ಗ್ಯಾರಂಟಿ ಕೊಟ್ಟು ಹತ್ತು ಕೈಗಳಲ್ಲಿ ಬದುಕಿನ ಗ್ಯಾರಂಟಿ ಕಿತ್ತುಕೊಳ್ಳುತ್ತಿದ್ದೀರಿ? ಇದು ನ್ಯಾಯವೇ?

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

2 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

4 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

4 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

5 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

6 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

11 hours ago