ಮಂಡ್ಯ ಜಿಲ್ಲೆಯ ಗ್ಯಾರಂಟಿಗಳ 2ನೇ ಸಮಾವೇಶದಲ್ಲಿ ಅಲವತ್ತುಕೊಂಡ ಸಿಎಂ ಸಿದ್ದರಾಮಯ್ಯನವರೇ.. ಕೊನೆಗೂ ಸತ್ಯ ನುಡಿದಿದ್ದೀರಿ! ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು, ಕೊನೆಗೂ ಸತ್ಯ ಕಕ್ಕಿದ್ದೀರಿ! ಸುಳ್ಳುರಾಮಯ್ಯನೆಂಬ ಕುಖ್ಯಾತಿಯಿಂದ ಹೊರಬರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೀರಿ. ಅಭಿನಂದನೆಗಳು.
ಸತ್ಯ ಗಂಟಲಲ್ಲಿ ಸಿಕ್ಕಿಕೊಂಡ ಬಿಸಿತುಪ್ಪದಂತೆ.. ಕಕ್ಕಲೇಬೇಕು. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ. ನಿಮ್ಮದೇ ಮಾತುಗಳಲ್ಲಿ ಹೇಳುವುದಾದರೆ.. ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ.. ಕಾಂಗ್ರೆಸ್ ವೋಟುಗಳಿಂದಲೇ ಗೆದ್ದಿದ್ದು ಆಯಮ್ಮ..!!
ಇದಲ್ಲವೇ ನಂಬಿಕೆದ್ರೋಹ..?
ನಿಮ್ಮ ಗೋಮುಖವ್ಯಾಘ್ರತನ ಅರಿಯಲು ಇಷ್ಟು ಸಾಕು. ಅಂದು ಕಾಂಗ್ರೆಸ್ ಮೈತ್ರಿ ಪಕ್ಷ, ನಿಖಿಲ್ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ. ಅವರ ಜತೆಯಲ್ಲೇ ಪ್ರಚಾರದ ಸೋಗಿನಾಟವಾಡಿ, ಮಾಧ್ಯಮಗಳ ಮುಂದೆ ಗೆಲ್ಲಿಸುತ್ತೇವೆಂದು ಪೋಸು ಕೊಡುತ್ತಲೇ ನಿಖಿಲ್ ಸುತ್ತ ಶಕುನಿವ್ಯೂಹವನ್ನೇ ರಚಿಸಿದ ಕಲಿಯುಗ ಶಕುನಿ ನೀವಲ್ಲದೆ ಮತ್ತ್ಯಾರು ಸಿದ್ದರಾಮಯ್ಯನವರೇ?
ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗದೇ? ಬೂದಿ ಮುಚ್ಚಿದ ಕೆಂಡ ತಣ್ಣಗಿರಲು ಸಾಧ್ಯವೇ? ಕುದಿಯುವ ಕುಲುಮೆಯಂತಿರುವ ನಿಮ್ಮ ಉದರಹುರಿಗೆ ತಂಪೆನ್ನುವುದುಂಟೆ? 5 ವರ್ಷಗಳ ನಂತರವಾದರೂ ಸತ್ಯ ಕಕ್ಕಿದ್ದೀರಿ ಹಾಗೂ ನಂಬಿದವನ ಮನೆ ನಾಶವಾಗಲಿ ಎನ್ನುವ ನಿಮ್ಮಹೇಯತನ ಬಯಲಾಗಿದೆ.
ಸತ್ಯಮೇಯ ಜಯತೆ. ಇದಿಷ್ಟೇ ನನ್ನ ಕಳಕಳಿ ಮತ್ತು ನಂಬಿಕೆ.
ಸಕ್ಕರೆ ಕಾರ್ಖಾನೆ ಬಗ್ಗೆ ಹೇಳಿದ್ದೀರಿ. ಬಜೆಟ್ʼನಲ್ಲಿ ಘೋಷಣೆ ಮಾಡಿದ್ದೀರಿ, ಸರಿ.. ದುಡ್ಡು ಎಲ್ಲಿಟ್ಟಿದ್ದೀರಿ. ನಾನು 2019ರ ಬಜೆಟ್ ನಲ್ಲಿಯೇ ಈ ಕಾರ್ಖಾನೆಗೆ 100 ಕೋಟಿ ತೆಗೆದಿರಿಸಿದ್ದೆ. ಎಲ್ಲಿ ಹೋಯಿತು ಆ ದುಡ್ಡು? ಇದರ ಬಗ್ಗೆ ಗ್ಯಾರಂಟಿ ಸಮಾವೇಶದಲ್ಲಿ ಚಕಾರ ಎತ್ತಿಲಿಲ್ಲವೇಕೆ ಸಿದ್ದರಾಮಯ್ಯನವರೇ? ಇಂಥ ಆತ್ಮವಂಚನೆ ಏತಕ್ಕೆ?
ತನ್ನ ತಲೆಗೇ ಹರಳೆಣ್ಣೆ ಇಲ್ಲ, ಪಕ್ಕದವನಿಗೆ ಸಂಪಂಗೆಣ್ಣೆ ಕೊಟ್ಟನಂತೆ ನಿಮ್ಮಂಥವನೊಬ್ಬ! ನಿಮ್ಮ ವೈಖರಿ ಹಾಗಿದೆ. ಕನ್ನಡಿಗರು ಬರದ ಬೆಂಕಿಯಲ್ಲಿ ಬೇಯುತ್ತಿದ್ದರೆ ನಿಮ್ಮ ಸರಕಾರ ಕದ್ದೂಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ! ಒಂದು ಕೈಲಿ ಅಗ್ಗದ ಗ್ಯಾರಂಟಿ ಕೊಟ್ಟು ಹತ್ತು ಕೈಗಳಲ್ಲಿ ಬದುಕಿನ ಗ್ಯಾರಂಟಿ ಕಿತ್ತುಕೊಳ್ಳುತ್ತಿದ್ದೀರಿ? ಇದು ನ್ಯಾಯವೇ?
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…