ರಾಜ್ಯದಲ್ಲಿ ಖಾಲಿ ಉಳಿದಿರುವ ಪೊಲೀಸ್ ಹುದ್ದೆಗಳು ಭರ್ತಿಯಾಗದೆ ಇರುವುದು ರಾಜ್ಯದ ಕಾನೂನು ಸುವ್ಯವಸ್ಥೆಯ ಮೇಲೂ ಪರಿಣಾಮ ಉಂಟುಮಾಡಿದೆ. 2021 ರಲ್ಲಿ 402 PSI ಹುದ್ದೆಗಳಿಗಾಗಿ ನಡೆದ ನೇಮಕಾತಿ ಪ್ರಕ್ರಿಯೆಯನ್ನು ಬಹುತೇಕ ಪೂರ್ಣಗೊಳಿಸಿ 381 ಅಭ್ಯರ್ಥಿಗಳ ಹೆಸರನ್ನು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಪ್ರಕಟಿಸಲಾಗಿದೆ. ಆದರೆ, ಅಧಿಕೃತ ನೇಮಕಾತಿ ಆದೇಶ ಈವರೆಗೂ ಹೊರಡಿಸದೇ ಅನಗತ್ಯ ವಿಳಂಬ ಮಾಡಲಾಗಿದೆ. ಇದರಿಂದ ಆಯ್ಕೆಯಾದ ಅಭ್ಯರ್ಥಿಗಳು ಅತಂತ್ರ ಸ್ಥಿತಿಯಲ್ಲಿ ಮಾನಸಿಕ ನೋವು ಅನುಭವಿಸುತ್ತಿದ್ದಾರೆ, ಇವರನ್ನು ಅವಲಂಬಿಸಿರುವ ಕುಟುಂಬಗಳು ಆತಂಕದಲ್ಲಿವೆ. ಈ ಕೂಡಲೇ ನೆನೆಗುದಿಗೆ ಬಿದ್ದಿರುವ ಆಯ್ಕೆಯಾಗಿರುವ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯನ್ನು ಅಂತಿಮಗೊಳಿಸಲು ಗೃಹ ಸಚಿವರನ್ನು ಭೇಟಿಯಾಗಿ ಜರೂರು ಕ್ರಮ ವಹಿಸುವಂತೆ ವಿನಂತಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಗೃಹ ಇಲಾಖೆ ಕೂಡಲೇ ಈ ವಿಷಯವನ್ನು ಆದ್ಯತೆಯಾಗಿ ಪರಿಗಣಿಸುವಂತೆ ಒತ್ತಾಯಿಸುವೆ ಎಂದು ತಿಳಿಸಿದ್ದಾರೆ.