ಕನ್ನಡ ಸಾಹಿತ್ಯ ಪರಿಷತ್ತು 2022-2023ನೇ ಸಾಲಿನ ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼ ಪ್ರಕಟಗೊಂಡಿದೆ.
ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಒಬ್ಬ ಲೇಖಕ ಹಾಗೂ ಒಬ್ಬ ಲೇಖಕಿಯನ್ನು ಪ್ರತಿವರ್ಷ ಪರಿಷತ್ತಿನ ಮೂಲಕ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿಗೆ ಹಿರಿಯ ಲೇಖಕಿ ವಸುಮತಿ ಉಡುಪ ಹಾಗೂ ಲೇಖಕ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಅವರನ್ನು ಆಯ್ಕೆ ಮಾಡಲಾಗಿದೆ. 2023ನೇ ಸಾಲಿನ ಪ್ರಶಸ್ತಿಗೆ ಹಿರಿಯ ಲೇಖಕಿ ಡಾ. ಬಿ. ಟಿ. ಲಲಿತಾ ನಾಯಕ್ ಹಾಗೂ ಲೇಖಕ ಡಾ. ಅಮರೇಶ ನುಗಡೋಣಿ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರತಿವರ್ಷ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಒಬ್ಬ ಲೇಖಕ ಹಾಗೂ ಲೇಖಕಿಗೆ ತಲಾ 30,000ರೂ. ನಗದು, ಸ್ಮರಣಿಕೆ, ಹಾರ ಹಾಗೂ ಫಲತಾಂಬೂಲ ನೀಡಿ ಗೌರವಿಸಲಾಗುತ್ತದೆ.