ಮಾರ್ಚ್ 2023ರ SSLC ವಾರ್ಷಿಕ ಪರೀಕ್ಷೆಯನ್ನು ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ಇಂದು SSLC ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.
ಈ ವರ್ಷ ಶೇ 83.89 ಫಲಿತಾಂಶ ಬಂದಿದ್ದು, ಪರೀಕ್ಷೆ ಬರೆದ 8,35,102 ವಿದ್ಯಾರ್ಥಿಗಳಲ್ಲಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಪಡೆದಿದ್ದಾರೆ.
ಈ ಬಾರಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಶೇ 83.89 ವಿದ್ಯಾರ್ಥಿನಿಯರು, ಶೇ 80.08 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಚಿತ್ರದುರ್ಗಕ್ಕೆ ಶೇ. 96.80 ಪಡೆದು ಪ್ರಥಮ ಸ್ಥಾನ ಗಳಿಸಿದೆ, ಮಂಡ್ಯ ಜಿಲ್ಲೆಗೆ ಶೇ. 96.74, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 96.48% ಪಡೆದು ನಾಲ್ಕನೇ ಸ್ಥಾನ ಪಡೆದಿದೆ. ಕೊನೆಯ ಸ್ಥಾನ ಗಳಿಸಿರುವ ಯಾದಗಿರಿ ಜಿಲ್ಲೆಯಲ್ಲಿ ಶೇ.75.49ರಷ್ಟು ಫಲಿತಾಂಶ ಬಂದಿದೆ.
ಈ ಬಾರಿ ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಮೌಲ್ಯಮಾಪನಕ್ಕೆ ವ್ಯವಸ್ಥೆ ಮಾಡಲಾಗಿತ್ತು. 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು.
ಈ ಮುಖ್ಯ ಪರೀಕ್ಷೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 273 ಪ್ರೌಢಶಾಲೆಗಳಿಂದ ಒಟ್ಟು 14040 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿತರಾಗಿದ್ದರು. ಇದರಲ್ಲಿ 7,218 ಮಂದಿ ಬಾಲಕರು, 6,822 ಮಂದಿ ಬಾಲಕಿಯರು ಇದ್ದಾರೆ. 295 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು
ಫಲಿತಾಂಶವನ್ನು http://karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…