ಭಾರತ ಚುನಾವಣಾ ಆಯೋಗವು ಇಂದು ಬೆಳಿಗ್ಗೆ 11.30ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ. ಈ ಹಿನ್ನೆಲೆ ಇಂದು ಬೆಳಿಗ್ಗೆ 11:30ಕ್ಕೆ ಭಾರತ ಚುನಾವಣಾ ಆಯೋಗದಿಂದ ಪತ್ರಿಕಾಗೋಷ್ಠಿ ನಡೆಸಲಾಗುತ್ತಿದೆ.
ಪತ್ರಿಕಾಗೋಷ್ಠಿಯಲ್ಲಿ ಚುನಾವಣೆಯ ವೇಳಾಪಟ್ಟಿಯನ್ನು ಘೋಷಣೆ ಆಗಲಿದೆ. ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನದ ದಿನಾಂಕ, ಫಲಿತಾಂಶದ ದಿನದ ಜೊತೆಗೆ ನೀತಿ ಸಂಹಿತೆ ವಿಚಾರಗಳ ಬಗ್ಗೆ ಮುಖ್ಯ ಚುನಾವಣಾ ಆಯುಕ್ತ ವಿವರಣೆ ನೀಡುವ ಸಾಧ್ಯತೆ.
ಪ್ರಸ್ತುತ ವಿಧಾನಸಭೆಯ ಅವಧಿಯು ಮೇ 24, 2023 ರಂದು ಮುಕ್ತಾಯಗೊಳ್ಳುತ್ತದೆ. ಈ ಹಿನ್ನೆಲೆ ಬುಧವಾರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ವೇಳಾಪಟ್ಟಿ ಪ್ರಕಟವಾದ ಬಳಿಕ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಸಾಧ್ಯತೆ.
ಈಗಾಗಲೇ ರಾಜ್ಯ ಚುನಾವಣಾ ಆಯೋಗದ ಜಂಟಿ ಆಯುಕ್ತರು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ ಬರೆದು, ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆ ಆಗಬಹುದು. ಅಗತ್ಯ ಚುನಾವಣಾ ಸಿದ್ಧತೆಯನ್ನು ಕೈಗೊಳ್ಳಿ ಎಂದು ಸೂಚಿಸಿತ್ತು. ಅದರ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದು, ರಾಜಕೀಯ ನಾಯಕರ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಿದ್ದಾರೆ. ಜಿಲ್ಲಾ ಗಡಿಯಲ್ಲಿ ಚೆಕ್‌ಪೋಸ್ಟ್ ನಿರ್ಮಿಸಿ ಚುನಾವಣಾ ಅಕ್ರಮಗಳ ಮೇಲೆ ಕಣ್ಣಿಟ್ಟಿದ್ದಾರೆ.