ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ನವರ ಮಲತಾಯಿ ಧೋರಣೆಯಿಂದ ಎಸ್ ಸಿ, ಎಸ್ ಟಿ ಜನಾಂಗವನ್ನು ಕಡೆಗಣಿಸುತ್ತಲೇ ಬಂದಿದ್ದಾರೆ. ಅವರು ಮೇಲ್ನೋಟಕ್ಕೆ ನಾನು ಜಾತ್ಯಾತೀತ ವ್ಯಕ್ತಿ ಎಂದು ಹೇಳಿಕೊಂಡು ಒಳಗಡೆ ಕಳೆದ ಹತ್ತು ವರ್ಷಗಳಿಂದ ಜಾತಿ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಆದ್ದರಿಂದ ಶಾಸಕರ ನಡೆ ವಿರೋಧಿಸಿ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರಿಗೆ ಸಮಸ್ತ ಮಾದಿಗ ಸಮುದಾಯ ಚುನಾವಣೆಯಲ್ಲಿ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಕರ್ನಾಟಕ ಸ್ವಾಭಿಮಾನಿ ಮಾದಿಗ ಸಂಘಟನೆಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿದ್ದರಾಜು ತಿಳಿಸಿದರು.
ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹತ್ತು ವರ್ಷದ ಹಿಂದೆ ಹೋಬಳಿಗೊಂದು ಮದ್ಯದ ಅಂಗಡಿ ಇತ್ತು ಟಿ.ವೆಂಕಟರಮಣಯ್ಯ ಶಾಸಕರಾದ ಮೇಲೆ ಪ್ರತಿ ಹಳ್ಳಿಯಲ್ಲಿ ಕಾನೂನು ಬಾಹಿರವಾಗಿ ಎರಡು ಮೂರು ಮದ್ಯದ ಅಂಗಡಿಗಳು ಇದ್ದು, ಜನತೆಗೆ ಹಾಡು ಹಗಲೇ ಮದ್ಯ ಕೊಟ್ಟು ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ, ಮದ್ಯದ ದಂಧೆ ಎಗ್ಗಿಲ್ಲದೆ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದರು.
ಕಳೆದ 40 ವರ್ಷಗಳ ನಿರಂತರ ಮಾದಿಗರ ಸ್ವಾಭಿಮಾನದ ಒಕ್ಕೊರಲಿನ ಹೋರಾಟವನ್ನು ಗೌರವಿಸಿ ಕರ್ನಾಟಕದ ವಿಧಾನಸಭೆಯಲ್ಲಿ ವೈಜ್ಞಾನಿಕ ಒಳ ಮೀಸಲಾತಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡಿದ ಬಿಜೆಪಿ ಪಕ್ಷಕ್ಕೆ ಹಾಗೂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರ ಪರ ಮಾದಿಗ ಸಮುದಾಯ ಬೆಂಬವಾಗಿ ನಿಲ್ಲಲಿದೆ ಎಂದರು.
ಸಮಸ್ತ ಪರಿಶಿಷ್ಟ ಜಾತಿಯ ವೈಜ್ಞಾನಿಕ ಒಳ ಮೀಸಲಾತಿಯಾದ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ ಬಿಜೆಪಿ ಸರ್ಕಾರಕ್ಕೆ ನಮ್ಮ ಮಾದಿಗ ಸಮುದಾಯದ ಬೆಂಬಲ ಸೂಚಿಸುತ್ತಿದ್ದು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟರಲ್ಲೇ ಬಹುಸಂಖ್ಯಾತರಾದ ಮಾದಿಗರು ಈ ವೋಟಿನ ರಾಜಕಾರಣದಲ್ಲಿ ನಿರ್ಣಾಯಕವಾದ ಪಾತ್ರ ವಹಿಸುವುದು ಮಹತ್ವಪೂರ್ಣವಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಖಜಾಂಚಿ ಕೆ.ಬಿ ಗೋವಿಂದರಾಜು, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಅನ್ನಪೂರ್ಣ, ರಾಜ್ಯ ಸಂಘಟನಾ ಕಾರ್ಯದರ್ಶಿ ಚನ್ನಿಗರಾಯಪ್ಪ, ಜಿಲ್ಲಾಧ್ಯಕ್ಷ ನಾಗರಾಜು.ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್. ಜಿ ಇದ್ದರು.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…