ಮೇ.10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಚುನಾವಣೆಯ ದಿನವನ್ನು ಮತದಾನದ ಹಬ್ಬವೆಂದು ಭಾವಿಸಿ ಪ್ರತಿಯೊಬ್ಬ ಮತದಾರರು ಯಾವುದೇ ಹಣ, ಆಸೆ-ಆಕಾಂಕ್ಷೆಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ತಾ.ಪಂ ಕಾರ್ಯನಿರ್ವಾಹಕಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಶ್ರೀನಾಥ್ ಗೌಡ ತಿಳಿಸಿದರು.
ತಾಲೂಕು ಸ್ವೀಪ್ ಸಮಿತಿ ವತಿಯಿಂದ ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮತದಾನದ ದಿನದಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದ್ದು, ಮತದಾರರು ತಪ್ಪದೇ ಮತ ಚಲಾಯಿಸಿ ಪ್ರಾಮಾಣಿಕ ವ್ಯಕ್ತಿಗಳನ್ನು ಆರಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಿ ಉತ್ತಮ ದೇಶ ನಿರ್ಮಾಣ ಮಾಡಬೇಕೆಂದು ಮನವಿ ಮಾಡಿದರು.
ಗ್ರಾಮದ ಬೀದಿ-ಬೀದಿಗಳಲ್ಲಿ ಮತದಾನದ ಜಾಗೃತಿ ಮೂಡಿಸುವ ಘೋಷಣೆಗಳನ್ನು ಕೂಗುತ್ತಾ ಜಾಥಾ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಸಿಬ್ಬಂದಿ, ಎನ್.ಆರ್. ಎಲ್.ಎಂ.ವಲಯ ಮೇಲ್ವಿಚಾರಕ ಯೋಗೇಶ್, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…