95 ನೇ ಆಸ್ಕರ್ ಪ್ರಶಸ್ತಿ ಪ್ರಕಟಗೊಂಡಿದ್ದು, ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರಕ್ಕೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಲಭಿಸಿದೆ. ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ಇದಾಗಿದೆ. ಈ ಬಾರಿಯ ಆಸ್ಕರ್‌ನಲ್ಲಿ ಭಾರತಕ್ಕೆ ಲಭಿಸಿದ ಪ್ರಥಮ ಪ್ರಶಸ್ತಿಯಾಗಿದೆ.
ಲಾಸ್ ಎಂಜಲೀಸ್‌ನಲ್ಲಿ ನಡೆಯುತ್ತಿರುವ ಅದ್ದೂರಿ ಸಮಾರಂಭದಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್’ ಎಂಬ ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರವನ್ನು ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿದ್ದಾರೆ. ಸಿಖ್ಯ ಎಂಟರ್‌ಟೈನ್‌ಮೆಂಟ್‌ನ ಗುನೀತ್ ಮೊಂಗಾ ಮತ್ತು ಅಚಿನ್ ಜೈನ್ ನಿರ್ಮಾಣದಲ್ಲಿ ಈ ಕಿರು ಚಿತ್ರ ಮೂಡಿಬಂದಿದೆ.
ಅನಾಥ ಆನೆ ಮರಿಯ ಆರೈಕೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ದಂಪತಿಯ ಕಥೆಯನ್ನು ‘ದಿ ಎಲಿಫೆಂಟ್ ವಿಸ್ಪರರ್ಸ್’ ಹೊಂದಿದೆ. ಮುದುಮಲೈ ರಾಷ್ಟ್ರೀಯ ಉದ್ಯಾನವನದಲ್ಲಿ ನಿರ್ಮಿಸಲಾದ ಈ ಸಾಕ್ಷ್ಯಚಿತ್ರದಲ್ಲಿ ಸ್ಥಳೀಯ ದಂಪತಿಗಳಾದ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ.
ಈ ಸಾಕ್ಷ್ಯಚಿತ್ರವು ಆನೆ ಮತ್ತು ಆ ದಂಪತಿ ನಡುವೆ ಬೆಳೆಯುವ ಬಾಂಧವ್ಯವನ್ನು ಮಾತ್ರವಲ್ಲದೆ ಅಲ್ಲಿನ ಪ್ರಾಕೃತಿಕ ಸೌಂದರ್ಯವನ್ನು ಕಾಣಬಹುದು.
‘ಹೌಲೌಟ್’, ‘ಹೌ ಡು ಯು ಮೆಷರ್ ಎ ಇಯರ್?’, ‘ದಿ ಮಾರ್ಥಾ ಮಿಚೆಲ್ ಎಫೆಕ್ಟ್’ ಮತ್ತು ‘ಸ್ಟ್ರೇಂಜರ್ ಅಟ್ ದಿ ಗೇಟ್’ ಕಿರು ಚಿತ್ರಗಳೊಡನೆ ಸ್ಪರ್ಧಿಸಿ, ‘ದಿ ಎಲಿಫೆಂಟ್ ವಿಸ್ಪರರ್ಸ್’ ಪ್ರಶಸ್ತಿ ಪಡೆದುಕೊಂಡಿದೆ.
ಹಿಂದೆ, ಭಾರತದಿಂದ “ಸ್ಮೈಲ್ ಪಿಂಕಿ” ಮತ್ತು “ಪಿರಿಯಡ್ ಎಂಡ್ ಆಫ್ ಸೆಂಟೆನ್ಸ್” ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗಳನ್ನು ಗೆದ್ದುಕೊಂಡಿತು.