ಬಹು ನಿರೀಕ್ಷೆಯ ಏಷ್ಯಾ ಕಪ್ 2023 ಕ್ರಿಕೆಟ್ ಪಂದ್ಯಾವಳಿಗೆ ಭಾರತ ತಂಡವನ್ನು ಬಿಸಿಸಿಐ ಇಂದು ಪ್ರಕಟಗೊಳಿಸಿದೆ.
ಗಾಯಗೊಂಡಿದ್ದ ಸ್ಟಾರ್ ಬ್ಯಾಟ್ಸ್ಮನ್ ವಿಕೆಟ್ ಕೀಪರ್ ಕೆ.ಎಲ್. ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಭರವಸೆಯ ಆಟಗಾರ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದು ಟೀಂ ಇಂಡಿಯಾದ ಮನೋಬಲ ಹೆಚ್ಚಿಸಿದೆ.
ಈಗಾಗಲೇ ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಮಿಂಚುತ್ತಿರುವ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ಬೌಲಿಂಗ್ ವಿಭಾಗಕ್ಕೆ ಬಲ ತುಂಬಲಿದ್ದಾರೆ.
ತಂಡದಲ್ಲಿರುವ ಆಟಗಾರರು
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ತಿಲಕ್ ವರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)