ಭಾರತವನ್ನು 2023ರ ಅಂತ್ಯದ ವೇಳೆಗೆ ದಢಾರ ಮತ್ತು ರುಬೆಲ್ಲಾ ರೋಗಮುಕ್ತ ದೇಶವನ್ನಾಗಿಸಲು ರೋಗ ನಿರ್ಮೂಲನೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಲಸಿಕಾ ಕಾರ್ಯಪಡೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲಸಿಕೆಗಳಿಂದ ತಡೆಗಟ್ಟಬಹುದಾದ ಮಾರಕ ರೋಗಗಳ ವಿರುದ್ಧ ಮಕ್ಕಳನ್ನು ರಕ್ಷಿಸಲು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಅನೇಕ ಲಸಿಕೆಗಳನ್ನು ನೀಡಲಾಗುತ್ತಿದೆ.
ಕೇಂದ್ರ ಸರ್ಕಾರವು 2023ರ ಅಂತ್ಯದ ವೇಳೆಗೆ ದಢಾರ ಮತ್ತು ರುಬೆಲ್ಲಾ ನಿರ್ಮೂಲನೆಗಾಗಿ ಹಲವು ಚಟುವಟಿಕೆಗಳನ್ನು ತೀವ್ರಗೊಳಿಸಿ 2023ರ ಡಿಸೆಂಬರ್ ಅಂತ್ಯದ ವೇಳೆಗೆ ದಢಾರ ಮತ್ತು ರುಬೆಲ್ಲಾ ಯಶಸ್ವಿ ನಿರ್ಮೂಲನೆಗಾಗಿ ಅಗತ್ಯ ಕ್ರಮಗಳನ್ನು ವಹಿಸಲು ಸೂಚಿಸಿದರು.
ಜಿಲ್ಲೆಯಲ್ಲಿ ಅರ್ಹ ಮಕ್ಕಳಿಗೆ ದಢಾರ ಮತ್ತು ರುಬೆಲ್ಲಾದ ಎರಡು ಡೋಸ್‌ಗಳ ಕನಿಷ್ಟ ಶೇ.95% ರಷ್ಟು ಲಸಿಕಾಕರಣದ ಪ್ರಗತಿ ಸಾಧಿಸಲು ಸೂಚಿಸಿದರಲ್ಲದೆ, ದಢಾರ ಮತ್ತು ರುಬೆಲ್ಲಾ ಲಸಿಕೆಯ ಮೊದಲನೇ ಡೋಸ್ ಮತ್ತು ಎರಡನೇ ಡೋಸ್‌ಗಳ ಡ್ರಾಪ್‌ಔಟ್‌ರೇಟ್ ಶೂನ್ಯ ಸಾಧಿಸಬೇಕಾಗಿದ್ದು, ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ತಮ್ಮ ಅಧೀನದ ವೈದ್ಯರಿಗೆ ಮತ್ತು ಸಿಬ್ಬಂದಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕೆಂದು ತಿಳಿಸಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಜೇಂದ್ರ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಸೀಮಾ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…