ಪ್ರಸಕ್ತ ಸಾಲಿನಲ್ಲಿ ಕೃಷಿ ಪ್ರಶಸ್ತಿ ಯೋಜನೆ ಕಾರ್ಯಕ್ರಮದಲ್ಲಿ ಆಸಕ್ತ ಪುರುಷ ರೈತರು ಹಾಗೂ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಸಲುವಾಗಿ ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಕೃಷಿ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2023-24ನೇ ಸಾಲಿನ ಕೃಷಿ ಪ್ರಶಸ್ತಿ ಯೋಜನೆ ಕಾರ್ಯಕ್ರಮದಲ್ಲಿ ಬೆಳೆ ಸ್ಪರ್ಧೆಗೆ ಆಸಕ್ತ ಪುರುಷ ರೈತರು ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು 2023 ರ ಆಗಸ್ಟ್ 31 ಕೊನೆ ದಿನವಾಗಿರುತ್ತದೆ.
ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.